ತಮ್ಮನ ಸಾವಿನ ಸುದ್ದಿ ಕೇಳಿ ಆತ್ಮಹತ್ಯೆಗೆ ಶರಣಾದ ಅಕ್ಕ..!

(ನ್ಯೂಸ್ ಕಡಬ) newskadaba.com ಹಾವೇರಿ, ನ. 27. ತಮ್ಮನ ಸಾವಿನ ಸುದ್ದಿ ತಿಳಿಯುತ್ತಿದ್ದಂತೆಯೇ ಅಕ್ಕ ಆತ್ಮಹತ್ಯೆಗೆ ಶರಣಾಗಿರುವ ಹೃದಯ ವಿದ್ರಾವಕ ಘಟನೆ ಹಾವೇರಿ ಜಿಲ್ಲೆ ಬ್ಯಾಡಗಿ ಪಟ್ಟಣದ ವಿನಾಯಕ ನಗರದಲ್ಲಿ ನಡೆದಿದೆ.


ಮೃತಪಟ್ಟವರನ್ನು ನಾಗರಾಜ್(16) ಹಾಗೂ ಅಕ್ಕ ಭ್ಯಾಗ್ಯಶ್ರೀ(18) ಎಂದು ಗುರುತಿಸಲಾಗಿದೆ. ಶುಕ್ರವಾರದಂದು ಬೆಳಗ್ಗೆ ನಾಗರಾಜ್ ಆತ್ಮಹತ್ಯೆಗೆ ಶರಣಾಗಿದ್ದರೆ, ಮಧ್ಯಾಹ್ನ 12 ಗಂಟೆಯ ವೇಳೆಗೆ ಆತನ ಅಕ್ಕ ಭಾಗ್ಯಶ್ರೀ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ಶಾಲೆ ಆರಂಭವಾಗಿದ್ದರಿಂದ ತರಗತಿಗೆ ಹೋಗುವಂತೆ ಪೋಷಕರು ನಾಗರಾಜ್ ಗೆ ತಿಳಿಸಿದ್ದು, ಇದರಿಂದ ಮುನಿಸಿಕೊಂಡ ನಾಗರಾಜ್ ಕೋಣೆಗೆ ತೆರಳಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ತಮ್ಮನ ಸಾವಿನ ಸುದ್ದಿ ತಿಳಿದ ಭಾಗ್ಯಶ್ರೀ ಕೂಡಾ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಈ ಕುರಿತು ಬ್ಯಾಡಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read  ಅ.17 ರಂದು ತಲಕಾವೇರಿಯಲ್ಲಿ ಬೆಳಿಗ್ಗೆ 7.03 ಗಂಟೆಗೆ ತೀರ್ಥೋದ್ಭವ

error: Content is protected !!
Scroll to Top