ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಇಲ್ಲ- ಈ ಕರಿತು ವದಂತಿ ಹಬ್ಬಿಸಿದಲ್ಲಿ ಕ್ರಮ ➤ ಆರೋಗ್ಯ ಸಚಿವ ಸುಧಾಕರ್ ಸ್ಪಷ್ಟನೆ



(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 29. ರಾಜ್ಯದಲ್ಲಿ ಕೊರೋನಾ ಪ್ರಕರಣ ಹೆಚ್ಚಳವಾಗುತ್ತಿರುವ ಕುರಿತು ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಆರೋಗ್ಯ ಸಚಿವ ಸುಧಾಕರ್, ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಮಾಡುವುದಿಲ್ಲ. ಅಲ್ಲದೇ ಲಾಕ್ ಡೌನ್ ಕುರಿತು ಇಲ್ಲಸಲ್ಲದ ವದಂತಿ ಹಬ್ಬಿಸಿದಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಸ್ಪಷ್ಟಪಡಿಸಿದ್ದಾರೆ.







 

ಲಾಕ್ ಡೌನ್‌ ಕುರಿತು ಕೆಲವು ಮಾಧ್ಯಮಗಳು ವರದಿ ಮಾಡುತ್ತಿರುವುದು ಜನರನ್ನು ಆತಂಕಕ್ಕೀಡು ಮಾಡಿದೆ. ಲಾಕ್ ಡೌನ್ ಬಗ್ಗೆ ಸರಕಾರದಿಂದ ಅಧಿಕೃತ ಮಾಹಿತಿ ಬಂದ ಬಳಿಕ ಜನರು ನಂಬಬೇಕು. ಸದ್ಯಕ್ಕೆ ಈ ಕುರಿತು ಸರಕಾರದ ಮುಂದೆ ಯಾವುದೇ ಪ್ರಸ್ತಾವನೆ ಇಲ್ಲ ಎಂದಿದ್ದಾರೆ. ನಾಳೆ ಆರೋಗ್ಯ ಇಲಾಖಾ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಬಳಿಕ ಒಮಿಕ್ರಾನ್ ಹಾಗೂ ಜಿನೋಮಿಕ್ ಸೀಕ್ವೇನ್ ಪತ್ತೆಯಾದ ಮೇಲೆ ಸರಿಯಾದ ಮಾಹಿತಿ ಸಿಗಲಿದೆ ಎಂದಿದ್ದಾರೆ.






 

error: Content is protected !!
Scroll to Top