ಲೋಕಸಭೆಯಲ್ಲಿ ವಿವಾದಾತ್ಮಕ ಕೃಷಿ ಕಾಯ್ದೆಗಳ ರದ್ದತಿ ಮಸೂದೆ ಅಂಗೀಕಾರ

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ನ. 29. ಕೃಷಿ ಕಾನೂನುಗಳ ರದ್ದತಿ ಮಸೂದೆಯ ಮೇಲೆ ಚರ್ಚೆಗೆ ಒತ್ತಾಯಿಸಿ ಪ್ರತಿಪಕ್ಷ ನಾಯಕರು ಸದನದಲ್ಲಿ ಪ್ರತಿಭಟನೆ ನಡೆಸುತ್ತಿರುವಾಗಲೇ ಕೇಂದ್ರ ಸರಕಾರವು ವಿವಾದಾತ್ಮಕ ಕೃಷಿ ಕಾಯ್ದೆಯನ್ನು ರದ್ದುಗೊಳಿಸುವ ಮಸೂದೆಯನ್ನು ಲೋಕಸಭೆಯಲ್ಲಿ ಸೋಮವಾರದಂದು ಅಂಗೀಕರಿಸಿದೆ ಎಂದು ವರದಿ ತಿಳಿಸಿದೆ.

ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರು ಪ್ರತಿಪಕ್ಷಗಳ ಗದ್ದಲದ ನಡುವೆ ಲೋಕಸಭೆಯಲ್ಲಿ ಕೃಷಿ ಕಾನೂನು ರದ್ದತಿ ಮಸೂದೆಯನ್ನು ಮಂಡಿಸಿದ್ದರು. ಲೋಕಸಭೆ ಕಲಾಪವನ್ನು ಮಧ್ಯಾಹ್ನ ಎರಡು ಗಂಟೆಗೆ ಮುಂದೂಡಾಲಾಗಿದೆ.

Also Read  ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ ಗಿರೀಶ್ ಕಾರ್ನಾಡ್ ವಿಧಿವಶ

error: Content is protected !!
Scroll to Top