(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 29. ಹೊಸ ರೂಪಾಂತರಿ ತಳಿ ಒಮಿಕ್ರಾನ್ ಕಾರಣದಿಂದ ಮಕ್ಕಳನ್ನು ಶಾಲೆಗೆ ಕಳುಹಿಸುವಲ್ಲಿ ಪೋಷಕರು ಹಿಂಜರಿಯುತ್ತಿರುವ ವಿಚಾರಕ್ಕೆ ಸಂಬಂಧಿಸಿ ಮಾತನಾಡಿದ ಸಚಿವ ಬಿ.ಸಿ.ನಾಗೇಶ್, ರಾಜ್ಯದಲ್ಲಿ ಶಾಲಾ ಕಾಲೇಜು ಭೌತಿಕ ತರಗತಿಗಳನ್ನು ಸ್ಥಗಿತಗೊಳಿಸುವ ನಿರ್ಧಾರ ಕೈಗೊಂಡಿಲ್ಲ. ಈ ಕುರಿತು ಪೋಷಕರು ಆತಂಕ ಪಡಬೇಕಾಗಿಲ್ಲ ಎಂದಿದ್ದಾರೆ.
ಈ ಕುರಿತು ಮಾಧ್ಯಮದೊಂದಿಗೆ ಮಾತನಾಡಿದ ಅವರು, ಶಾಲಾ ಕಾಲೇಜುಗಳನ್ನು ಮುಚ್ಚುವ ನಿರ್ಧಾರ ಸದ್ಯ ಶಿಕ್ಷಣ ಇಲಾಖೆಯ ಮುಂದಿಲ್ಲ. ಶಿಕ್ಷಣ ಇಲಾಖೆ ಹಾಗೂ ಆರೋಗ್ಯ ಇಲಾಖೆ ಕೊರೊನಾ ಹಿನ್ನೆಲೆಯಿಂದಾಗಿ ಸದಾ ಸಂಪರ್ಕದಲ್ಲಿದೆ. ಕೊರೋನಾ ಹೆಚ್ಚಾದರೆ ಸರ್ಕಾರದ ಸಲಹೆಯಂತೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.