ಉಪ್ಪಿನಂಗಡಿ: ರಿಕ್ಷಾ ಹಾಗೂ ಲಾರಿ ನಡುವೆ ಢಿಕ್ಕಿ ➤ ಮಗು ಮೃತ್ಯು, ಮೂವರು ಗಂಭೀರ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ನ. 29. ಅಟೋರಿಕ್ಷಾ ಹಾಗೂ ಲಾರಿ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಅಟೋದಲ್ಲಿದ್ದ ಮಗು ಮೃತಪಟ್ಟು ಮೂವರು ಗಾಯಗೊಂಡ ಘಟನೆ ಉಪ್ಪಿನಂಗಡಿ ಮಠ ಎಂಬಲ್ಲಿ ಸೋಮವಾರದಂದು ಸಂಜೆ ಸಂಭವಿಸಿದೆ.

 

ಗಾಯಾಳುಗಳನ್ನು ಸ್ಥಳೀಯರ ಸಹಕಾರದಿಂದ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ತೀವ್ರತೆಗೆ ರಿಕ್ಷಾ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Scroll to Top