ದ.ಕ.‌ ಜಿಲ್ಲೆಯಲ್ಲಿ ಮತ್ತೆ ಗ್ಯಾಂಗ್ ವಾರ್ ➤ ಓರ್ವ ಗಂಭೀರ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 30. ದುಷ್ಕರ್ಮಿಗಳ ತಂಡವೊಂದು ಯುವಕನ ಮೇಲೆ ದಾಳೆ ನಡೆಸಿದ ಘಟನೆ ಸೋಮವಾರ ರಾತ್ರಿ ಸಂಭವಿಸಿದೆ.

ಗಾಯಗೊಂಡ ಯುವಕನನ್ನು ಶ್ರವಣ್ ಎಂದು ಗುರುತಿಸಲಾಗಿದೆ. ‘ಅಳಿಕೆ’ ಗ್ಯಾಂಗ್ ಗೆ ಸೇರಿದ ಎಂಟು ಜನರ ತಂಡವೊಂದು ಈ ದುಷ್ಕೃತ್ಯ ನಡೆಸಿದ್ದು, ಗಂಭೀರ ಗಾಯಗೊಂಡ ಯುವಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಎರಡು ಗುಂಪುಗಳ ನಡುವಿನ ವೈಷಮ್ಯವೇ ಘಟನೆಗೆ ಕಾರಣ ಎಂದು ಮೂಲಗಳು ತಿಳಿಸಿವೆ. 2020ರ ಇಂದ್ರಜಿತ್ ಕೊಲೆ ಪ್ರಕರಣಕ್ಕೆ ಇದು ಪ್ರತೀಕಾರವಾಗಿರಬಹುದ ಎಂದು ಹೇಳಲಾಗುತ್ತಿದೆ. ಈ ಕುರಿತು ಉರ್ವ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Also Read  ರಾಹುಲ್‌ ಗಾಂಧಿ ಬಗ್ಗೆ ಅಪಪ್ರಚಾರ..!   ಪೊಳಲಿಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ರಮಾನಾಥ ರೈ

error: Content is protected !!
Scroll to Top