ಸುಬ್ರಹ್ಮಣ್ಯ: ಚಂಪಾಷಷ್ಟಿ ಪ್ರಯುಕ್ತ ಮೂಲಮೃತ್ತಿಕಾ ಪ್ರಸಾದ ವಿತರಣೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಡಿ. 01. ಕುಕ್ಕೇ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಜಾತ್ರೆಯ ಚಂಪಾಷಷ್ಟಿ ಮಹೋತ್ಸವದ ಪ್ರಯುಕ್ತ ಕ್ಷೇತ್ರ ಮೂಲಮೃತ್ತಿಕಾ ಪ್ರಸಾದ ವಿತರಣೆ ನಡೆಯಿತು.

ಕ್ಷೇತ್ರದ ಪ್ರಧಾನ ಅರ್ಚಕ ವೇ/ ಮೂ/ ಸೀತಾರಾಮ ಎಡಪಡಿತ್ತಾಯ ಅವರು ವೈದಿಕ ವಿಧಿ ವಿಧಾನಗಳೊಂದಿಗೆ ಮೂಲ ಪ್ರಸಾದವನ್ನು ತೆಗೆದು, ಬಳಿಕ ಪುರೋಹಿತರು, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಜ, ಸದಸ್ಯರು, ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ನೀಡಲಾಯಿತು. ಅಪರಾಹ್ನ ಬಳಿಕ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಯಿತು. ಈ ಸಂದರ್ಭ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ ರಾಂ ಸುಳ್ಳಿ, ಸದಸ್ಯರಾದ ಪ್ರಸನ್ನ ದರ್ಬೆ, ಪಿಜಿಎಸ್ ಎನ್ ಪ್ರಸಾದ್, ಲೋಕೇಶ್ ಬಾಳುಗೋಡು ಮೊದಲಾದವರು ಉಪಸ್ಥಿತರಿದ್ದರು.

Also Read  ಕಡಬ: ಅನಾರೋಗ್ಯದಿಂದ ಕೃಷಿಕ ಮೃತ್ಯು

error: Content is protected !!
Scroll to Top