ಶಾಲೆಗೆ ತೆರಳುತ್ತಿದ್ದ ವಿದ್ಯಾರ್ಥಿನಿಗೆ ಅಪರಿಚಿತ ವ್ಯಕ್ತಿಯಿಂದ ಕಿರುಕುಳ..! ➤ ದೂರು ದಾಖಲು



(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 01. ಶಾಲೆಗೆ ತೆರಳುತ್ತಿದ್ದ ಅಪ್ರಾಪ್ತ ಬಾಲಕಿಗೆ ಸ್ಕೂಟರಿನಲ್ಲಿ ಬಂದ ವ್ಯಕ್ತಿಯೋರ್ವ ಲೈಂಗಿಕ ಕುರುಕುಳ ನೀಡಿದ ಘಟನೆ ತಲಪಾಡಿಯ ಆಲಂಕಾರುಗುಡ್ಡೆ ಎಂಬಲ್ಲಿ ನಡೆದಿದೆ.







ಕೋಟೆಕಾರು ಶಾಲೆಗೆ ತೆರಳುತ್ತಿದ್ದ ವಿದ್ಯಾರ್ಥಿನಿ ತಲಪಾಡಿ ಚೆಕ್ ಪೋಸ್ಟ್ ಬಳಿ ಬಸ್ಸು ಹತ್ತಲು ಒಳದಾರಿಯಾಗಿ ಬರುತ್ತಿದ್ದ ವೇಳೆ ಸ್ಕೂಟರ್ ನಲ್ಲಿ ಬಂದ ವ್ಯಕ್ತಿಯೋರ್ವ ಕಿರುಕುಳ ನೀಡಿದ್ದು, ಇದರಿಂದ ಹೆದರಿದ ವಿದ್ಯಾರ್ಥಿನಿ ಬೊಬ್ಬೆ ಹಾಕಿದ್ದು, ಸ್ಥಳೀಯರು ಬರುವಷ್ಟರಲ್ಲೇ ಆರೋಪಿ ಪರಾರಿಯಾಗಿದ್ದಾನೆ ಎನ್ನಲಾಗಿದೆ. ಬಳಿಕ. ವಿದ್ಯಾರ್ಥಿನಿಗೆ ಧೈರ್ಯ ತುಂಬಿದ ಸ್ಥಳೀಯರು ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ‌. ಆರೋಪಿಗಾಗಿ ಬಲೆ ಬೀಸಿರುವ ಪೊಲೀಸರು ಸಿಸಿ ಟಿವಿಯ ಆಧಾರದಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ.






error: Content is protected !!
Scroll to Top