ಕಲ್ಲಿನ ಕೋರೆಯಲ್ಲಿ ಸ್ಫೋಟ ➤ ಕೆಲಸದಲ್ಲಿ ತೊಡಗಿದ್ದ ಕಾರ್ಮಿಕರಿಬ್ಬರಿಗೆ ಗಾಯ

(ನ್ಯೂಸ್ ಕಡಬ) newskadaba.com ಕಾರ್ಕಳ, ಡಿ. 01. ತಾಲೂಕಿನ ಜಾರ್ಕಳ ಎಂಬಲ್ಲಿರುವ ಕಲ್ಲಿನ ಕೋರೆಯೊಂದರಲ್ಲಿ ಸ್ಫೋಟ ಸಂಭವಿಸಿದ ಪರಿಣಾಮ ಅಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಕಾರ್ಮಿಕರು ಗಂಭೀರ ಗಾಯಗೊಂಡ ಘಟನೆ ನಡೆದಿದೆ.


ಗಾಯಗೊಂಡ ಕಾರ್ಮಿಕರನ್ನು ತಮಿಳುನಾಡು ಮೂಲದ ಮಂಜುನಾಥ (44) ಹಾಗೂ ರಾಘವೇಂದ್ರ (40) ಎಂದು ಗುರುತಿಸಲಾಗಿದೆ. ಗಾಯಾಳು ಕಾರ್ಮಿಕರಿಬ್ಬರೂ ವಿಕಲಚೇತನರಾಗಿದ್ದು, ಇವರನ್ನು ಕಾರ್ಕಳದ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೋರೆಯಲ್ಲಿ ಕಲ್ಲುಗಳನ್ನು ಹೊಡೆಯಲು ಸ್ಫೋಟಕಗಳನ್ನು ಬಳಸಲಾಗುತ್ತಿದ್ದು, ರಾಸಾಯನಿಕ ವಸ್ತುಗಳ ಬಳಕೆಯ ಸಂದರ್ಭ ಮುಂಜಾಗ್ರತೆ ವಹಿಸದಿರುವುದೇ ದುರ್ಘಟನೆಗೆ ಕಾರಣ ಎಂದು ತಿಳಿದುಬಂದಿದೆ. ಈ ಕುರಿತು ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read  ದ.ಕದಲ್ಲಿ ಸಾವಿನ ಸಂಖ್ಯೆ 18ಕ್ಕೇರಿಕೆ ➤ 49 ವರ್ಷದ ವ್ಯಕ್ತಿ ಕೊರೊನಾಗೆ ಬಲಿ

error: Content is protected !!
Scroll to Top