ಮಂಗಳೂರು: ಅಪ್ರಾಪ್ತ ಮಗಳ ಮೇಲೆಯೇ ಲೈಂಗಿಕ‌ ದೌರ್ಜನ್ಯ ➤ ಆರೋಪಿ ರೌಡಿಶೀಟರ್ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 01. ಮಗಳ ಮೇಲೆಯೇ ಲೈಂಗಿಕ ದೌರ್ಜನ್ಯವೆಸಗಿರುವ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ರೌಡಿಶೀಟರ್ ತಂದೆಯನ್ನೇ ಬಂಧಿಸಿದ ಘಟನೆ ನಡೆದಿದೆ.

ಬಂಧಿತ ಆರೋಪಿ ತಂದೆ ಕದ್ರಿ ನಿವಾಸಿಯಾಗಿದ್ದು, ದೌರ್ಜನ್ಯಕ್ಕೆ ಒಳಗಾದ ಬಾಲಕಿ ಒಂದನೇ ತರಗತಿ ವಿದ್ಯಾರ್ಥಿನಿ ಎಂದು ತಿಳಿದುಬಂದಿದೆ. ಅಲ್ಲದೇ ಈತ ತನ್ನ ತಾಯಿಗೂ ಹಲ್ಲೆ ಮಾಡಿರುವ ಕುರಿತು ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Scroll to Top