ಮಂಗಳೂರು ವಿಶ್ವ ವಿದ್ಯಾನಿಲಯ- ಸರಕಾರಿ ಕೋಟಾ ಸೀಟುಗಳಿಗೆ ಅರ್ಜಿ ಸಲ್ಲಿಕೆಯ‌ ಅವಧಿ‌ ವಿಸ್ತರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 01. 2021-22ನೇ ಸಾಲಿನ ಶೈಕ್ಷಣಿಕ ವರ್ಷದ ಮಂಗಳೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ವಿಭಾಗಗಳು/ವಿಶ್ವವಿದ್ಯಾನಿಲಯ ಕಾಲೇಜು, ಮಂಗಳೂರು/ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜು, ಮಂಗಳೂರು/ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜು, ಮಡಿಕೇರಿ/ಸ್ನಾತಕೋತ್ತರ ಕೇಂದ್ರ ಚಿಕ್ಕ ಅಳುವಾರ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ಸಂಯೋಜಿತ ಕಾಲೇಜುಗಳು (ಸರಕಾರಿ ಕೋಟಾ ಸೀಟುಗಳಿಗೆ) ಮತ್ತು ಸರಕಾರಿ ಕಾಲೇಜುಗಳಲ್ಲಿ ನಡೆಸಲ್ಪಡುವ ವಿವಿಧ ಸ್ನಾತಕೋತ್ತರ/ಪಿ.ಜಿ ಡಿಪ್ಲೋಮಾ ಮತ್ತು ಸರ್ಟಿಫಿಕೇಟ್ ಕಾರ್ಯಕ್ರಮಗಳ ಪ್ರವೇಶಾತಿಗೆ ಅರ್ಜಿ ಸಲ್ಲಿಸುವ ಕೊನೆಯ ದಿನವನ್ನು ನವೆಂಬರ್ 30ರಿಂದ ಡಿಸೆಂಬರ್ 9ರ ವರೆಗೆ ವಿಸ್ತರಿಸಲಾಗಿದೆ.

ಈ ಕುರಿತ ಹೆಚ್ಚಿನ ಮಾಹಿತಿಯನ್ನು ಮಂಗಳೂರು ವಿಶ್ವವಿದ್ಯಾನಿಲಯದ ವೆಬ್‍ಸೈಟ್ http://www.mangaloreuniversity.ac.in ನಲ್ಲಿ ಪಡೆಯಬಹುದು ಎಂದು ಮಂಗಳೂರು ವಿಶ್ವವಿದ್ಯಾನಿಲಯ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!

Join the Group

Join WhatsApp Group