ಡಿ. 08, 09ರಂದು ರಾಜ್ಯ ಆಹಾರ ಆಯೋಗ ಅಧ್ಯಕ್ಷ ಎಚ್.ವಿ.ಶಿವಶಂಕರ್ ದ.ಕ. ಜಿಲ್ಲಾ ಪ್ರವಾಸ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 01. ರಾಜ್ಯ ಆಹಾರ ಆಯೋಗದ ಅಧ್ಯಕ್ಷರಾದ ಎಚ್.ವಿ. ಶಿವಶಂಕರ್ ಅವರು 2021ರ ಡಿಸೆಂಬರ್ 8 ಹಾಗೂ 9 ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಪ್ರವಾಸ ಕೈಗೊಂಡಿದ್ದಾರೆ.


ಪ್ರವಾಸ ಕಾರ್ಯಕ್ರಮಗಳ ವಿವರ ಇಂತಿವೆ:
ಡಿಸೆಂಬರ್ 8ರ ಬೆಳಿಗ್ಗೆ 10 ಗಂಟೆಗೆ ಮಂಗಳೂರಿಗೆ ಆಗಮಿಸಿ ವಾಸ್ತವ್ಯ ಮಾಡಲಿದ್ದಾರೆ. ಡಿಸೆಂಬರ್ 9ರ ಬೆಳಿಗ್ಗೆ 8 ರಿಂದ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಪಡಿತರ ಕಾರ್ಡುದಾರರಿಗೆ ಪಡಿತರ ಆಹಾರ ಧಾನ್ಯಗಳ ವಿತರಣೆ, ಅಂಗನವಾಡಿಯಲ್ಲಿ ಮಧ್ಯಾಹ್ನ ಬಿಸಿಯೂಟ ಯೋಜನೆಯ ಪರಿಶೀಲನೆ ಹಾಗೂ ಜಿಲ್ಲೆಯ ಗೋದಾಮುಗಳಲ್ಲಿ ಆಹಾರ ಧಾನ್ಯಗಳ ಸಂಗ್ರಹಣೆ ಮತ್ತು ದಾಸ್ತಾನು ಪರಿಶೀಲನೆ ನಡೆಸಿ, ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸುವರು. ಸಂಜೆ ಬೆಂಗಳೂರಿಗೆ ಪ್ರಯಾಣಿಸಲಿದ್ದಾರೆ ಎಂದು ಕರ್ನಾಟಕ ರಾಜ್ಯ ಆಹಾರ ಆಯೋಗದ ಸದಸ್ಯ ಕಾರ್ಯದರ್ಶಿಯಾಗಿರುವ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರ ಇಲಾಖೆಯ ಅಪರ ಉಪನಿದೇರ್ಶಕರು-2 ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also Read  KMSPico Download [Official KMSPico 2024 Edition]

error: Content is protected !!
Scroll to Top