2021-22 ನೇ ಸಾಲಿನ ವಿವಿಧ ಅಭಿವೃದ್ಧಿ ನಿಗಮಗಳಿಂದ ವಿವಿಧ ಯೋಜನೆ ಹಾಗೂ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 01. 2021-22ನೇ ಸಾಲಿಗೆ ವಿವಿಧ ಅಭಿವೃದ್ದಿ ನಿಗಮಗಳಿಂದ ಹಲವು ಯೋಜನೆಗಳು ಹಾಗೂ ಸಾಲ ಸೌಲಭ್ಯಗಳಿಗಾಗಿ ಆಫ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.


ನಿಗಮಗಳ ವಿವರ ಹಾಗೂ ಸಂಪರ್ಕಿಸಬೇಕಾದ ವೆಬ್‍ಸೈಟ್ ವಿಳಾಸ ಇಂತಿವೆ:
ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ: www.dbcdc.karnataka.gov.in
ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ: https://ambigaradevelopment.karnataka.gov.in
ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮ: upparadevelopment.karnataka.gov.in
ಕರ್ನಾಟಕ ಅಲೆಮಾರಿ ಅರೆ ಅಲೆಮಾರಿ ಅಭಿವೃದ್ಧಿ ನಿಗಮ: https://kaad.karnataka.gov.in
ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ: www.kvcdcl.karnataka.gov.in
ವಿವಿಧ ಯೋಜನೆಗಳು ಇಂತಿವೆ:
ಅರಿವು ಶೈಕ್ಷಣಿಕ ಸಾಲ ಯೋಜನೆ ನವೀಕರಣ(ರಿನಿವಲ್), ಸ್ವಯಂ ಉದ್ಯೋಗ, ವೈಯ್ಯಕ್ತಿಕ ಸಾಲ ಯೋಜನೆ, ಗಂಗಾಕಲ್ಯಾಣ ಯೋಜನೆ, ಕಿರುಸಾಲ ಯೋಜನೆ.

Also Read  ಕಾರಿನ ಮೇಲೆ ನಿಂತಿದ್ದ ವೇಳೆ ಆಯತಪ್ಪಿ ಬಿದ್ದ ಸಚಿವ ಸೋಮಣ್ಣ..! ➤ ಕೈ ಹಿಡಿದ ಕಿಚ್ಚ ಸುದೀಪ್

ಅರ್ಹರು ದೇವರಾಜ ಅರಸು ನಿಗಮದ ವೆಬ್‍ಸೈಟ್: www.dbcdc.karnataka.gov.in ಕ್ಕೆ ಭೇಟಿ ನೀಡಬಹುದು. 2022ರ ಜನವರಿ 10 ರೊಳಗೆ ಅಗತ್ಯ ದಾಖಲೆಗಳೊಂದಿಗೆ ಕಚೇರಿಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಜಿಲ್ಲಾ ವ್ಯವಸ್ಥಾಪಕರು, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ರೇಡಿಯೋ ಪಾರ್ಕ್ ಬಳಿ, ಉರ್ವಸ್ಟೋರ್, ಮಂಗಳೂರು, ಈ ವಿಳಾಸಕ್ಕೆ ಸಂಪರ್ಕಿಸಬಹುದು ಎಂದು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!
Scroll to Top