ಧರ್ಮಸ್ಥಳ: ಇಂದು ಸರ್ವಧರ್ಮ ಸಮ್ಮೇಳನ 89ನೇ ಅಧಿವೇಶನಕ್ಕೆ ರಾಜ್ಯಪಾಲರಿಂದ ಚಾಲನೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಡಿ. 02. ಸರ್ವಧರ್ಮ ಸಮ್ಮೇಳನದ 89ನೇ ಅಧಿವೇಶನಕ್ಕೆ ಇಂದು ಧರ್ಮಸ್ಥಳ ಕ್ಷೇತ್ರದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಲ್ನೋಟ್ ಅವರು ಚಾಲನೆ ನೀಡಲಿದ್ದಾರೆ.


ಇಂದು ಸಂಜೆ 5 ಗಂಟೆಗೆ ಅಮೃತವರ್ಷಿಣಿ ಸಭಾ ಭವನದಲ್ಲಿ ಅಧಿವೇಶನವನ್ನು ರಾಜ್ಯಪಾಲ ಥಾವರ್ ಚಂದ್ ಗೆಲ್ನೋಟ್ ಅವರು ಉದ್ಘಾಟಿಸಲಿರುವರು. ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ ಸ್ವಾಗತಿಸಿ, ಬೆಂಗಳೂರಿನ ಎಸ್. ವ್ಯಾಸ ಯೋಗ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ. ರಾಮಚಂದ್ರ ಭಟ್ ಅವರು ಅಧ್ಯಕ್ಷತೆ ವಹಿಸುವರು. ಸಾಗರದ ಖ್ಯಾತ ಸಾಹಿತಿ ಸಫ್ರಾಜ್‌ ಚಂದ್ರಗುತ್ತಿ, ಮೈಸೂರು ವಿವಿಯ ನಿವೃತ್ತ ಪ್ರಾಧ್ಯಾಪಕರಾದ ಡಾ. ಎಂ.ಎಸ್. ಪದ್ಮ ಹಾಗೂ ಶಿವಮೊಗ್ಗ ಧರ್ಮಪ್ರಾಂತ್ಯದ ಸಾರ್ವಜನಿಕ ಸಂಪರ್ಕಾಧಿಕಾರಿ ವೀರೇಶ್ ವಿ. ಮೊರಾಸ್ ಧಾರ್ಮಿಕ ಉಪನ್ಯಾಸ ನೀಡಲಿರುವರು.

Also Read  ಮರ್ಧಾಳ ನೆಕ್ಕಿತ್ತಡ್ಕ ಮಖಾಂ ಉರೂಸ್ ಗೆ ಚಾಲನೆ ➤ ಇಂದಿನಿಂದ ಮಾರ್ಚ್ 02ರ ವರೆಗೆ ಉರೂಸ್ ಸಮಾರಂಭ

 

error: Content is protected !!
Scroll to Top