ಕನ್ನಡ ಚಿತ್ರರಂಗದ ಹಿರಿಯ ನಟ ಶಿವರಾಂ ಸ್ಥಿತಿ ಗಂಭೀರ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 02. ಕಳೆದ ಮೂರು ದಿನಗಳ ಹಿಂದೆ ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆಯ ಬಳಿಕ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದ ಕನ್ನಡ ಚಿತ್ರ ರಂಗದ ಹಿರಿಯ ನಟ ಶಿವರಾಮ್ ಅವರು ಮನೆಯಲ್ಲಿ ಪೂಜೆ ಮಾಡುತ್ತಿದ್ದ ವೇಳೆ ಬಿದ್ದ ಕಾರಣ ತಲೆಗೆ ಪೆಟ್ಟಾಗಿದ್ದು, ಸದ್ಯದ ಸ್ಥಿತಿ ಗಂಭೀರವಾಗಿದೆ ಎಂದು ಮೂಲಗಳು ತಿಳಿಸಿವೆ.


ಇವರಿಗೆ ಹೊಸಕೆರೆ ಹಳ್ಳಿಯ ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎನ್ನಲಾಗಿದೆ. 3 ದಿನಗಳ ಹಿಂದೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಅಪಘಾತವಾಗಿದ್ದು, ಚಿಕಿತ್ಸೆ ಪಡೆದು ಮನೆಗೆ ಮರಳಿದ್ದರು. ಶಿವರಾಮ್ ಆರೋಗ್ಯದ ಬಗ್ಗೆ ಹಿರಿಯ ಪುತ್ರ ರವಿಶಂಕರ್ ಮಾಹಿತಿ ನೀಡಿದ್ದು ‘‘ಮೂರು ದಿನಗಳ ಹಿಂದೆ ಕಾರಿನಲ್ಲಿ ಹೊರಗೆ ಹೋಗಿದ್ದ ವೇಳೆ ಕಾರು ಅಪಘಾತವಾಗಿತ್ತು. ನಂತರ ಅವರಿಗೆ ಚಿಕಿತ್ಸೆ ನೀಡಿ ಮನೆಗೆ ಹಿಂತಿರುಗಿದ್ದರು. ಮೊನ್ನೆ ರಾತ್ರಿ ಮನೆಯಲ್ಲಿ ಪೂಜೆ ಮಾಡಲೆಂದು ರೂಂಗೆ ತೆರಳಿದ್ದ ವೇಳೆ ರೂಂನಲ್ಲಿ ಬಿದ್ದಿದ್ದು, ಈ ಹಿನ್ನೆಲೆ ತಲೆಗೆ ಬಲವಾದ ಪೆಟ್ಟು ಬಿದ್ದಿದೆ. ತಕ್ಷಣವೇ ಅಸ್ಪತ್ರೆಗೆ ಕರೆದುಕೊಂಡು ಹೋಗಿ ಸ್ಕ್ಯಾನಿಂಗ್ ಮಾಡಿಸಿದ್ದೆವು. ಈ ರಿಪೋರ್ಟ್ ನಲ್ಲಿ ಮೆದುಳಿನಲ್ಲಿ ರಕ್ತಸ್ರಾವ ಆಗಿರೋದು ಗೊತ್ತಾಗಿ, ವೈದ್ಯರು ಸರ್ಜರಿ ಮಾಡಬೇಕೆಂದು ಹೇಳಿದರು. ಅದ್ರೆ ನಮ್ಮ ತಂದೆಗೆ ವಯಸ್ಸಾಗಿದ್ದರಿಂದ ಸರ್ಜರಿ ಮಾಡಲು ಸಾಧ್ಯವಾಗುತ್ತಿಲ್ಲ. ಸದ್ಯ ಐಸಿಯುನಲ್ಲೇ ಅವರಿಗೆ ಚಿಕಿತ್ಸೆ ಮುಂದುವರಿದಿದೆ’’ ಎಂದು ತಿಳಿಸಿದ್ದಾರೆ.

Also Read  ?ಮಂಗಳೂರು ವಿವಿಯಲ್ಲಿ ಕುಲಪತಿ ಸ್ಥಾನ ಕೊಡಿಸುವುದಾಗಿ ಭಾರೀ ಹಣ ವಂಚನೆ ➤ ಆರೋಪಿಯ ಬಂಧನ

error: Content is protected !!
Scroll to Top