ನಾಳೆ‌ (ಡಿ. 03) ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ದ.ಕ. ಜಿಲ್ಲಾ ಪ್ರವಾಸ

(ನ್ಯೂಸ್ ಕಡಬ) newskadaba.com ಮಂಗಳೂರು ಡಿ. 02. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ.ಕೆ. ಸುಧಾಕರ್ ಅವರು ಡಿ.3 ರಿಂದ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸವನ್ನು ಕೈಗೊಂಡಿದ್ದಾರೆ.


ಅವರು ಕೈಗೊಂಡಿರುವ ಪ್ರವಾಸ ಕಾರ್ಯಕ್ರಮದ ವಿವರ ಇಂತಿವೆ:
ಡಿ. 03ರ ಶುಕ್ರವಾರ ಸಂಜೆ 4.20ಕ್ಕೆ ಹೆಲಿಕಾಪ್ಟರ್ ಮೂಲಕ ಧರ್ಮಸ್ಥಳದ ಹೆಲಿಪ್ಯಾಡ್‍ಗೆ ಆಗಮಿಸಿ, ಅಂದು ಸಂಜೆ 5 ಗಂಟೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವದ ಪ್ರಯುಕ್ತ ಆಯೋಜಿಸಿರುವ 89ನೇ ಸಾಹಿತ್ಯ ಸಮ್ಮೇಳನದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಡಿ. 04ರಂದು ಬೆಳಿಗ್ಗೆ 7 ಗಂಟೆಗೆ ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ಪ್ರಯಾಣಿಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also Read  ಉಡುಪಿ: 50ಕ್ಕೂ ಹೆಚ್ಚು ದಲಿತರು ಬೌದ್ಧ ಧರ್ಮಕ್ಕೆ ಮತಾಂತರ

 

 

error: Content is protected !!
Scroll to Top