ಮನೆಯಂಗಳಕ್ಕೆ ಚಿರತೆ ಬಂದ ದೃಶ್ಯ ಸಿಸಿಟಿವಿಯಲ್ಲಿ ಸೆರೆ..!

(ನ್ಯೂಸ್ ಕಡಬ) newskadaba.com ಬಂಟ್ವಾಳ, ಡಿ. 03. ಮನೆಯ ಅಂಗಳಕ್ಕೆ ಚಿರತೆ ಬಂದಿರುವ ದೃಶ್ಯವೊಂದು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಮನೆ ಮಂದಿಯನ್ನು ಆತಂಕಕ್ಕೀಡು ಮಾಡಿದ ಘಟನೆ ನರಿಕೊಂಬು ಗ್ರಾಮದಲ್ಲಿ ನಡೆದಿದೆ.


ಡಿಸೆಂಬರ್ 1ರಂದು ತಡರಾತ್ರಿ ಎರಡು ಗಂಟೆ ಸುಮಾರಿಗೆ ನರಿಕೊಂಬು ಗ್ರಾಮದ ನಿರ್ಮಲ್ ನಿವಾಸಿ, ಜಯಂತ್ ನಿರ್ಮಲ್ ಎಂಬವರ ಮನೆಯ ಅಂಗಳಕ್ಕೆ ಚಿರತೆಯೊಂದು ಬಂದು ಹೋಗುವ ದೃಶ್ಯವು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಆಹಾರಕ್ಕಾಗಿ ನಾಯಿಯನ್ನು ಹುಡುಕಿ ಬಂದಿರಬಹುದು ಎಂದು ಶಂಕಿಸಲಾಗಿದೆ.

Scroll to Top