ಸುಳ್ಯ: ಟೆಂಪೋ ಟ್ರಾವೆಲರ್ ಹಾಗೂ ಬೈಕ್ ನಡುವೆ ಢಿಕ್ಕಿ ➤ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಸುಳ್ಯ, ಡಿ. 04. ಟೆಂಪೊ ಟ್ರಾವೆಲರ್ ಹಾಗೂ ಬೈಕ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಸವಾರ ಮೃತಪಟ್ಟ ಘಟನೆ ಗೂನಡ್ಕ ಸಮೀಪದ ಪೇಲ್ತಡ್ಕ ಎಂಬಲ್ಲಿ ನಡೆದಿದೆ.

ಮೃತ ವ್ಯಕ್ತಿಯನ್ನು ವಿನೋದ್ ಕುಮಾರ್ ಎಂದು ಗುರುತಿಸಲಾಗಿದೆ. ಪುತ್ತೂರಿನಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ಟೆಂಪೋ ಗೆ ಸಂಪಾಜೆಯಿಂದ ಸುಳ್ಯಕ್ಕೆ ಬರುತ್ತಿದ್ದ ಬೈಕ್ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ.

Scroll to Top