ಪುತ್ತೂರು: ದ್ವಿಚಕ್ರ ವಾಹನ ಢಿಕ್ಕಿ ➤ ಪಾದಚಾರಿ ಮೃತ್ಯು

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ. 04. ಪುತ್ತೂರು ಪೋಲಿಸ್ ಠಾಣಾ ಮುಂಭಾಗ ನಡೆದುಕೊಂದು ಹೋಗುತ್ತಿದ್ದ ವ್ಯಕ್ರಿಗೆ ದ್ವಿಚಕ್ರ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಮೃತಪಟ್ಟ ಘಟನೆ ವರದಿಯಾಗಿದೆ.


ಮೃತರನ್ನು ಚಿಕ್ಕಪುತ್ತೂರಿನ ಕೇಶವ ಎಂದು ಗುರುತಿಸಲಾಗಿದೆ. ಇವರು ಪುತ್ತೂರು ಹೆಗ್ಡೆ ಆರ್ಕೇಡ್ ಮುಂಭಾಗದಿಂದ ಮನೆಗೆ ನಡೆದುಕೊಂಡು ಹೋಗುತಿದ್ದ ವೇಳೆ ಧವಿಚಕ್ರ ವಾಹನವೊಂದು ಡಿಕ್ಕಿ ಹೊಡೆದಿದ್ದು, ಇದರ ತೀವ್ರತೆಗೆ ರಸ್ತೆಗೆಸೆಯಲ್ಪಟ್ಟ ಕೇಶವ ಅವರ ತಲೆಗೆ ಗಂಭೀರ ಗಾಯಗಳಾಗಿದ್ದವು. ಕೂಡಲೇ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಎಜೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಪೆಟ್ಟಿನ ರಭಸಕ್ಕೆ ಬಾರಿ ರಕ್ತಸ್ರಾವ ಆಗಿರುವುದರಿಂದ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಈ ಕುರಿತು ಪುತ್ತೂರು ಟ್ರಾಫಿಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Scroll to Top