ಸಿರಿಬಾಗಿಲು: ಸರಕಾರಿ ಶಾಲೆಯಲ್ಲಿ ಹುಟ್ಟುಹಬ್ಬ ಆಚರಿಸಿದ ಹಂಸಿಕಾ

(ನ್ಯೂಸ್ ಕಡಬ) newskadaba.com ಕಡಬ, ಡಿ.05. ಕೆಲವು ಖಾಸಗಿ ಶಾಲೆಗಳಲ್ಲಿ ಮಾತ್ರ ಖಾಸಗಿ ಕಾರ್ಯಕ್ರಮಗಳನ್ನು ಮಕ್ಕಳ ಪೋಷಕರು ಆಯೋಜಿಸುತ್ತಿದ್ದರೆ ಗ್ರಾಮೀಣ ಭಾಗದ ಸರಕಾರಿ ಶಾಲೆಯೊಂದರ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರು ತಮ್ಮ ಮಗಳ ಹುಟ್ಟುಹಬ್ಬವನ್ನು ಸರಕಾರಿ ಶಾಲೆಯಲ್ಲಿ ಆಚರಿಸಿ ಮಾದರಿಯಾಗಿದ್ದಾರೆ.

ಕಡಬ ತಾಲೂಕು ಕೊಂಬಾರು ಗ್ರಾಮದ ಸಿರಿಬಾಗಿಲು ಶಾಲೆಯ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಗಣೇಶ್ ಅನಿಲ ಅವರು ತನ್ನ ಮಗಳು ಹಂಸಿಕಾಳ ಮೊದಲ ವರ್ಷದ ಹುಟ್ಟುಹಬ್ಬವನ್ನು ಸಿರಿಬಾಗಿಲು ಸರಕಾರಿ ಶಾಲಾ ಮಕ್ಕಳಿಗೆ ಸಿಹಿ ಹಂಚಿದ್ದಲ್ಲದೆ ಶಾಲಾ ಗ್ರಂಥಾಲಯಕ್ಕೆ ಪುಸ್ತಕವನ್ನು ನೀಡಿ ಶಾಲೆಯಲ್ಲಿ ಆಚರಿಸುವುದರ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ. ಅಲ್ಲದೇ ತನ್ನ ಮಗಳನ್ನು ತಾನು ಕಲಿತಂತಹ ಸಿರಿಬಾಗಿಲು ಶಾಲೆಗೆ ಸೇರಿಸುವ ನಿರ್ಧಾರವನ್ನು ಕೈಗೊಂಡಿದ್ದಾರೆ.

Also Read  ಆರ್ಥಿಕ ಗಣತಿಗೆ ನಿಖರ ಮಾಹಿತಿ ನೀಡಲು ಮನವಿ

 

error: Content is protected !!
Scroll to Top