ಡಿ. 08ರಿಂದ ಭ್ರಷ್ಟಾಚಾರ ನಿಗ್ರಹ ದಳ ಅಧಿಕಾರಿಗಳಿಂದ ದೂರು ಸ್ವೀಕಾರ ➤ ಕಡಬದಲ್ಲಿ ಯಾವಾಗ ಗೊತ್ತೇ..?

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 06. ಇದೇ ಡಿ.08ರಿಂದ ಜಿಲ್ಲೆಯ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಕಡಬ, ಬೆಳ್ತಂಗಡಿ, ಬಂಟ್ವಾಳ, ಮೂಡಬಿದ್ರೆ, ಪುತ್ತೂರು ಹಾಗೂ ಸುಳ್ಯ ತಾಲೂಕು ಕೇಂದ್ರಗಳಿಗೆ ಭೇಟಿ ನೀಡಿ, ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತಹ ದೂರುಗಳನ್ನು ಸಾರ್ವಜನಿಕರಿಂದ ಸ್ವೀಕರಿಸಲಿದ್ದಾರೆ.

ಕಡಬ ತಾಲೂಕಿನ ದೂರುಗಳನ್ನು ಕಡಬ ಪಟ್ಟಣ ಪಂಚಾಯತ್ ಸಭಾಭವನದಲ್ಲಿ ಡಿಸೆಂಬರ್ 08ರ ಮಧ್ಯಾಹ್ನ 2.30 ರಿಂದ ಸಂಜೆ 4.30ರ ವರೆಗೆ, ಬೆಳ್ತಂಗಡಿ ತಾಲೂಕಿಗೆ ಸಂಬಂಧಿಸಿದಂತೆ ಬೆಳ್ತಂಗಡಿ ನಿರೀಕ್ಷಣಾ ಮಂದಿರದಲ್ಲಿ ಡಿಸೆಂಬರ್ 09ರ ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ, ಬಂಟ್ವಾಳ ತಾಲೂಕಿಗೆ ಸಂಬಂಧಿಸಿದಂತೆ ಬಂಟ್ವಾಳ ನಿರೀಕ್ಷಣಾ ಮಂದಿರದಲ್ಲಿ ಡಿಸೆಂಬರ್ 9 ರಂದು ಮಧ್ಯಾಹ್ನ 2.30 ರಿಂದ ಸಂಜೆ 4.30 ಗಂಟೆಯವರೆಗೆ, ಸುಳ್ಯ ತಾಲೂಕಿಗೆ ಸಂಬಂಧಿಸಿದಂತೆ ಅಲ್ಲಿನ ನಿರೀಕ್ಷಣಾ ಮಂದಿರದಲ್ಲಿ ಡಿಸೆಂಬರ್ 14ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಹಾಗೂ ಪುತ್ತೂರು ತಾಲೂಕಿಗೆ ಸಂಬಂಧಿಸಿದ ದೂರುಗಳನ್ನು ಪುತ್ತೂರು ನಿರೀಕ್ಷಣಾ ಮಂದಿರದಲ್ಲಿ ಡಿಸೆಂಬರ್ 14 ರಂದು ಮಧ್ಯಾಹ್ನ 2.30 ರಿಂದ ಸಂಜೆ 4.30 ಗಂಟೆಯವರೆಗೆ, ಮೂಡಬಿದ್ರೆ ತಾಲೂಕಿನ ನಿರೀಕ್ಷಣಾ ಮಂದಿರಲ್ಲಿ ಮೂಡಬಿದ್ರೆ ತಾಲೂಕಿಗೆ ಸಂಬಂಧಪಟ್ಟ ದೂರುಗಳನ್ನು ಡಿಸೆಂಬರ್ 15 ರಂದು  ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 12.30 ಗಂಟೆಯವರೆಗೆ ಸಾರ್ವಜನಿಕರಿಂದ ಸ್ವೀಕರಿಸಲಿದ್ದಾರೆ ಎಂದು ಭ್ರಷ್ಟಾಚಾರ ನಿಗ್ರಹ ದಳದ ಆರಕ್ಷಕ ಉಪಾಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also Read  ಸಮುದ್ರದಲ್ಲಿ ಪತ್ರಕರ್ತರ ನೌಕಾ ವಿಹಾರ

 

 

 

error: Content is protected !!
Scroll to Top