ಸುಬ್ರಹ್ಮಣ್ಯ: ಕುಕ್ಕೇ ಶ್ರೀ ಸುಬ್ರಹ್ಮಣ್ಯ ಚಂಪಾ ಷಷ್ಠಿ ಹಿನ್ನೆಲೆ ➤ ಎರಡು ದಿನಗಳ ಕಾಲ ಬಾರ್ ಬಂದ್- ಜಿಲ್ಲಾಧಿಕಾರಿ ಆದೇಶ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 07. ಕುಕ್ಕೇ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಚಂಪಾ ಷಷ್ಠಿ ಮಹೋತ್ಸವ ಪ್ರಯುಕ್ತ ಡಿ. 10ರ ವರೆಗೆ ನಡೆಯಲಿರುವ ರಥೋತ್ಸವಗಳ ಸಮಯದಲ್ಲಿ ಅಪಾರ ಭಕ್ತಾದಿಗಳು ಸೇರಲಿದ್ದಾರೆ.

ಕುಕ್ಕೆಶ್ರೀ ಸುಬ್ರಹ್ಮಣ್ಯದ ಪರಿಸರದಲ್ಲಿ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಹಿತದೃಷ್ಟಿಯಿಂದ ಮದ್ಯ ಮಾರಾಟ ಮತ್ತು ಸಾಗಾಣಿಕೆಯನ್ನು ನಿಷೇಧಿಸಿ ಜಿಲ್ಲಾ ದಂಡಾಧಿಕಾರಿಗಳಾದ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರು ಆದೇಶಿಸಿದ್ದಾರೆ.

 


ಜಿಲ್ಲಾಧಿಕಾರಿಯವರು ಕರ್ನಾಟಕ ಅಬಕಾರಿ ಕಾಯಿದೆ 1965 ರ ಸೆಕ್ಷನ್ 21 (1) ರ ಅಡಿಯಲ್ಲಿ ದತ್ತವಾದ ಅಧಿಕಾರವನ್ನು ಚಲಾಯಿಸಿ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಇಂಚಾಡಿ ಬಳಿಯಿರುವ ಪ್ರಶಾಂತ್ ಬಾರ್ ಆಂಡ್ ರೆಸ್ಟೋರೆಂಟ್ ಮತ್ತು ಬೆಳ್ಳಿ ಬಾರ್ ಅಂಡ್ ರೆಸ್ಟೋರೆಂಟ್ ಅನ್ನು ಡಿ. 08ರ ಬೆಳಿಗ್ಗೆ 06 ಗಂಟೆಯಿಂದ ಡಿ. 09 ರ ಮಧ್ಯರಾತ್ರಿ 12 ಗಂಟೆಯವರೆಗೆ ಮುಚ್ಚುವಂತೆ ಸೂಚಿಸಿದ್ದಾರೆ.

Also Read  ದಿನದಿಂದ ದಿನಕ್ಕೆ ಬಂಗಾರದ ಬೆಲೆ ಏರುತ್ತಲೆ ಇದೆ; ಇಂದಿನ ದರ ಎಷ್ಟಿದೆ..!

 

 

error: Content is protected !!
Scroll to Top