ಉಪ್ಪಿನಂಗಡಿ: ಸರಣಿ ಅಪಘಾತ ➤ ಮೂವರಿಗೆ ಗಾಯ



(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಡಿ. 10. ಲಾರಿ ಹಾಗೂ ಕಾರು ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಲಾರಿ ಪಲ್ಟಿಯಾಗಿ ರಸ್ತೆ ಮಧ್ಯೆ ಬಿದ್ದಿದ್ದು, ಅಪಘಾತಕ್ಕೀಡಾದ ಕಾರಿನ ಹಿಂದೆ ಬರುತ್ತಿದ್ದ ಇನ್ನೊಂದು ಲಾರಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ಮಗುಚಿ ಬಿದ್ದು, ಉಂಟಾದ ಸರಣಿ ಅಪಘಾತದಲ್ಲಿ ಮೂವರು ಗಾಯಗೊಂಡ‌ ಘಟನೆ ರಾ.ಹರ. 75ರ ಪಂಜಾಲ ಎಂಬಲ್ಲಿ ನಡೆದಿದೆ.








ಗಾಯಗೊಂಡವರನ್ನು ಕಾರು ಚಾಲಕ ಸಂತೋಷ್, ಲಾರಿ‌ ಚಾಲಕರಾದ ಶೀತಲ್ ಹಾಗೂ ಹೇಮಂತ್ ಎಂದು ಗುರುತಿಸಲಾಗಿದೆ. ಮೆಲ್ಕಾರಿನಿಂದ ನೆಲ್ಯಾಡಿ ಕಡೆಗೆ ಹೋಗುತ್ತಿದ್ದ ಕಾರಿಗೆ ವಿರುದ್ದ ದಿಕ್ಕಿನಿಂದ ಬರುತ್ತಿದ್ದ ಲಾರಿ ಢಿಕ್ಕಿ ಹೊಡೆದಿದ್ದು, ಪರಿಣಾಮ ಮೂವರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ‌ ಎನ್ನಲಾಗಿದೆ.






 

 

error: Content is protected !!
Scroll to Top