(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 10. ರಾಜ್ಯದಲ್ಲಿ ಕೊರೋನಾ ಏರಿಕೆ ಹಾಗೂ ಒಮಿಕ್ರಾನ್ ಆತಂಕದ ಹಿನ್ನೆಲೆ ರಾಜ್ಯದ ಹಾಸ್ಟೆಲ್ ಗಳಲ್ಲಿ ಹೊಸ ಮಾರ್ಗಸೂಚಿ ಜಾರಿ ಮಾಡಲಾಗಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಾಸ್ಟೆಲ್ ಗಳಲ್ಲಿ ಹೊಸ ಮಾರ್ಗಸೂಚಿ ಜಾರಿಗೊಳಿಸಲಾಗುವುದ, ವಿದ್ಯಾರ್ಥಿಗಳು ಒಟ್ಟಿಗೆ ಊಟ ಮಾಡುವಂತಿಲ್ಲ, ಇದರ ಬದಲು ಹಾಸ್ಟೆಲ್ ವಿದ್ಯಾರ್ಥಿಗಳು ಅಂತರ ಪಾಲಿಸಿಕೊಂಡು ಊಟ ಮಾಡುವುದಕ್ಕೆ ವ್ಯವಸ್ಥೆ ಮಾಡುವಂತೆ ಹಾಸ್ಟೆಲ್ ಗಳಿಗೆ ಸೂಚನೆ ನೀಡಲಾಗಿದೆ ಎಂದರು. ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ಹಾಗೂ ನೈಟ್ ಕರ್ಫ್ಯೂ ಬಗ್ಗೆ ನಿರ್ಧರಿಸಿಲ್ಲ. ಒಂದು ವಾರದ ಬಳಿಕ ನಿರ್ಧಾರ ಕೈಗೊಳ್ಳಲಾಗುವುದು, ಕ್ರಿಸ್ಮಸ್ ಹಾಗೂ ಹೊಸ ವರ್ಷಾಚರಣೆಯ ಬಗ್ಗೆ ಒಂದು ವಾರದ ಬೆಳವಣಿಗೆಯ ಬಳಿಕ ನಿರ್ಧರಿಸಲಾಗುವುದು ಎಂದು ಹೇಳಿದ್ದಾರೆ. ಗಡಿ ಭಾಗದ ಕಟ್ಟುನಿಟ್ಟಿನ ತಪಾಸಣೆ ಮುಂದುವರೆಯಲಿದ್ದು, ಒಂದು ವಾರದ ಬಳಿಕ ನಿರ್ಧಾರ ಕೈಗೊಳ್ಳಲಾಗುವುದು, ಸದ್ಯಕ್ಕೆ ಯಾವುದೇ ನಿರ್ಬಂಧ ವಿಧಿಸಿಲ್ಲ ಎಂದು ಹೇಳಿದ್ದಾರೆ.