ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿದ ಆರೋಪಿಗಳನ್ನು ಶೀಘ್ರವೇ ಬಂಧಿಸಿ ➤ ಶ್ರೀರಾಮ ಸೇನೆ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಉಡುಪಿ, ಡಿ. 10. ವಾಹನದ ಇನ್ಶೂರೆನ್ಸ್ ನೆಪದಲ್ಲಿ ಶ್ರೀರಾಮ ಸೇನೆಯ ಕಾರ್ಯರ್ತರೋರ್ವರಿಗೆ ಉಡುಪಿಯಲ್ಲಿನ ರಾಜಾಂಗಣಕ್ಕೆ ಕರೆಸಿಕೊಂಡ ದುಷ್ಕರ್ಮಿಗಳು ಏಕಾಏಕಿ ರಾಡ್ ನಿಂದ ಹಲ್ಲೆ ನಡೆಸಿದ ಘಟನೆ ನಡೆದಿದೆ.

ಈ ಕುರಿತು ಮಾತನಾಡಿದ ರಾಮ್ ಸೇನಾ ಜಿಲ್ಲಾಧ್ಯಕ್ಷ ಜಯರಾಂ ಅಂಬೆಕಲ್ಲು, ನಮ್ಮ ಕಾರ್ಯಕರ್ತನ ಮೇಲೆ ನಡೆದಿರುವ ಹಲ್ಲೆಯನ್ನು ಯಾವುದೇ ಕಾರಣಕ್ಕೂ ನಾವು ಸಹಿಸಲ್ಲ, ನಮ್ಮವರ ಮೇಲೆ ಹಲ್ಲೆ ಮಾಡಿದವರನ್ನು ಕೂಡಲೇ ಬಂಧಿಸಬೇಕು. ಇಲ್ಲದಿದ್ದರೆ ಉಡುಪಿ, ದ.ಕ ಜಿಲ್ಲೆಯ ಶ್ರೀರಾಮ ಸೇನೆಯ ಕಾರ್ಯಕರ್ತರಿಂದ ತೀವ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

 

Scroll to Top