(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 10. ರಾಜ್ಯದ ಶಾಲೆಗಳಲ್ಲಿ ಇನ್ನು ಮುಂದೆ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
ಪ್ಲಾಸ್ಟಿಕ್ ಕ್ಯಾರಿಬ್ಯಾಗ್, ಭಿತ್ತಿಪತ್ರ, ತೋರಣ, ಪ್ಲಾಸ್ಟಿಕ್ ಬಾವುಟ, ಪ್ಲಾಸ್ಟಿಕ್ ತಟ್ಟೆ ಹಾಗೂ ಥರ್ಮಕೋಲ್ ಸೇರಿದಂತೆ ಪ್ಲಾಸ್ಟಿಕ್ ನಿಂದ ತಯಾರಿಸಿದ ಯಾವುದೇ ವಸ್ತುಗಳನ್ನು ಬಳಸದಂತೆ ನಿರ್ಬಂಧ ವಿಧಿಸಲಾಗಿದ್ದು, ಈ ಹಿನ್ನೆಲೆ ಎಲ್ಲಾ ಡಿಡಿಪಿಐ ಹಾಗೂ ಬಿಇಒ ಗಳಿಗೆ ಪ್ಲಾಸ್ಟಿಕ್ ನಿಷೇಧಿಸುವಂತೆ ಸೂಚನೆ ಹೊರಡಿಸಲಾಗಿದ್ದು, ಕೂಡಲೇ ಜಾರಿಗೆ ಬರುವಂತೆ ಸಾರ್ವಜನಿಕ ಶಿಕ್ಷಣ ಇಲಾಖಾ ಆಯುಕ್ತರು ಆದೇಶ ನೀಡಿದ್ದಾರೆ.