ಸುಲ್ತಾನ್ ಗೋಲ್ಡ್ ನಿಂದ ಕೋಟ್ಯಂತರ ಮೌಲ್ಯದ ವಜ್ರಾಭರಣ ಕಳ್ಳತನ ➤ ಓರ್ವನ ಬಂಧನ

(ನ್ಯೂಸ್ ಕಡಬ) newskadaba.com ಕಾಸರಗೋಡು, ಡಿ. 11. ನಗರದ ಸುಲ್ತಾನ್ ಗೋಲ್ಡ್ ಜ್ಯುವೆಲ್ಲರಿಯಿಂದ 2.88 ಕೋಟಿ‌ರೂ. ಮೌಲ್ಯದ ವಜ್ರಾಭರಣ ದೋಚಿದ ಪ್ರಕರಣಕ್ಕೆ ಸಂಬಂದಿಸಿ ಎರಡನೇ ಆರೋಪಿಯನ್ನು ಪೊಲೀಸರು ಬಂಧಿಸಿದ‌ ಘಟನೆ ನಡೆದಿದೆ.


ಬಂಧಿತ ಆರೋಪಿಯನ್ನು ಬಂಟ್ವಾಳ ತಾಲೂಕಿನ ಇಮ್ರಾನ್ ಶಾಫಿ ಎಂದು‌ ಗುರುತಿಸಲಾಗಿದೆ. ಈತ ಪ್ರಮುಖ ಆರೋಪಿ ತಲೆಮರೆಸಿಕೊಂಡಿರುವ ಫಾರೂಕ್ ಎಂಬಾತನ ಸಹೋದರ ಎಂದು ಪೊಲೀಸರು ತಿಳಿಸಿದ್ದಾರೆ. ಈತನನ್ನು ಕಾಸರಗೋಡು‌ ಡಿವೈಎಸ್ಪಿ ನೇತೃತ್ವದ ತಂಡವು ಬೆಂಗಳೂರಿನಲ್ಲಿ ಬಂಧಿಸಿದೆ. ಆರೋಪಿಯನ್ನು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಿ, ಬಳಿಕ ಕಸ್ಟಡಿಗೆ ಪಡೆದು ಹೆಚ್ಚಿನ ವಿಚಾರಣೆ ನಡೆಸಲಾಗುವುದು‌ ಎನ್ನಲಾಗಿದೆ.

 

 

Scroll to Top