ಬೆಳ್ತಂಗಡಿ: ದ್ವಿಚಕ್ರ ವಾಹನ ಹಾಗೂ ಲಾರಿ ನಡುವೆ ಢಿಕ್ಕಿ ➤ ಸವಾರನಿಗೆ ಗಾಯ



(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಡಿ. 11. ಆಕ್ಟಿವಾ ಹಾಗೂ ಲಾರಿ ನಡುವೆ ಪರಸ್ಪರ ಢಿಕ್ಕಿ ಸಂಭವಿಸಿದ ಪರಿಣಾಮ ಓರ್ವ ಗಂಭೀರ ಗಾಯಗೊಂಡ ಘಟನೆ ಉಜಿರೆಯಲ್ಲಿ ನಡೆದಿದೆ.








ಗಾಯಗೊಂಡವರನ್ನು ಕಲ್ಮಂಜ ನಿವಾಸಿ ರಾಜೇಶ್ ಎಂದು ಗುರುತಿಸಲಾಗಿದೆ. ಇವರು ತಮ್ಮ ದ್ವಿಚಕ್ರ ವಾಹನದಲ್ಲಿ ಉಜಿರೆ ಕಡೆಗೆ ಪ್ರಯಾಣಿಸುತ್ತಿದ್ದ ಸಂದರ್ಭ ವಿರುದ್ದ ದಿಕ್ಕಿನಿಂದ ಬರುತ್ತಿದ್ದ ಲಾರಿ ನಡುವೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ಬಳಿ ಪರಸ್ಪರ ಢಿಕ್ಕಿ ಸಂಭವಿಸಿದ್ದು, ಪರಿಣಾಮ ರಸ್ತೆಗೆಸೆಯಲ್ಪಟ್ಟ ಸವಾರನ ಕಾಲಿಗೆ ಗಂಭೀರ ಗಾಯಗಳಾಗಿವೆ. ಕೂಡಲೇ ಸ್ಥಳೀಯರ ಸಹಾಯದಿಂದ ಉಜಿರೆ ಆಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಈ ಕುರಿತು ಬೆಳ್ತಂಗಡಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.






 

error: Content is protected !!
Scroll to Top