ಅಟೊ ರಿಕ್ಷಾ ಚಾಲಕನ ಮೇಲೆ ಹಲ್ಲೆ ಪ್ರಕರಣ ➤ ನಾಲ್ವರು ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 11. ನಗರದ ಹೊರವಲಯದ ಅಡ್ಯಾರ್ ಪದವಿನಲ್ಲಿ ಆಟೋ ರಿಕ್ಷಾ ಚಾಲಕನ ಮೇಲೆ ಹಲ್ಲೆಗೈದ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಪೊಲೀಸ್ ಆಯುಕ್ತ ಶಶಿಕುಮಾರ್, ಹಲ್ಲೆಗೆ ಕಾರಣವೇನೆಂದು ತಿಳಿದು ಬಂದಿಲ್ಲ. ಘಟನಾ ಸ್ಥಳದಲ್ಲಿ ಮಹಿಳೆಯ ಚಪ್ಪಲಿ ಪತ್ತೆಯಾಗಿತ್ತು. ಹಲ್ಲೆಗೊಳಗಾದ ವ್ಯಕ್ತಿಯ ಹಿನ್ನೆಲೆ ಪರಿಶೀಲನೆ ನಡೆಸುತ್ತಿದ್ದೇವೆ, ಆದರೆ ಗಾಯಾಳು ಇದುವರೆಗೆಊ ಯಾವುದೇ ಹೇಳಿಕೆ ನೀಡಿಲ್ಲ ಎಂದು ತಿಳಿಸಿದರು.

Also Read  ಸ್ಥಿರಾಸ್ತಿ- ಜಿಲ್ಲೆಯ ಯಾವುದೇ ಕಚೇರಿಯಲ್ಲಿಯೂ ನೋಂದಣೆಗೆ ಅವಕಾಶ

 

error: Content is protected !!
Scroll to Top