ಉಳ್ಳಾಲ: ಬಸ್ – ಬೈಕ್ ಢಿಕ್ಕಿ ► ಸವಾರ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಉಳ್ಳಾಲ, ನ.05. ಬಸ್ಸೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಕಲ್ಲಾಪು ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ಸಂಜೆ ನಡೆದಿದೆ.

ಮೃತ ಬೈಕ್ ಸವಾರನನ್ನು ಉಳ್ಳಾಲ್ ಬೈಲ್ ನಿವಾಸಿ ಮಹಮ್ಮದ್ ಸಯ್ಯದ್ ಶಲೀಲ್ ಎಂದು ಗುರುತಿಸಲಾಗಿದೆ. ತುಂಬೆ ಬಿ.ಎ. ಕಾಲೇಜಿನ ಡಿಪ್ಲೋಮಾ ವಿದ್ಯಾರ್ಥಿಯಾಗಿರುವ ಇವರು ಕಿವಿಗೆ ಇಯರ್ ಫೋನ್ ಇಟ್ಟು ಮೊಬೈಲ್ ನಲ್ಲಿ ಸಂಭಾಷಣೆ ಮಾಡುತ್ತ ಬೈಕ್ ಚಲಾಯಿಸುತ್ತಿದ್ದರು ಎನ್ನಲಾಗಿದೆ. ಈ ವೇಳೆ ಬೈಕ್ ಸ್ಕಿಡ್ ಆಗಿ ಶಲೀಲ್ ರಸ್ತೆಗೆ ಎಸೆಯಲ್ಪಟ್ಟಿದ್ದಾರೆ. ಪರಿಣಾಮ ಖಾಸಗಿ ಬಸ್ ನ ಚಕ್ರದಡಿಗೆ ಸಿಲುಕಿ ಸ್ಥಳದಲ್ಲೆ ಮೃತ ಪಟ್ಟಿದ್ದಾರೆ.

Scroll to Top