ಮಂಗಳೂರು: ಅನ್ಯಕೋಮಿನ ಜೋಡಿಯನ್ನು ಗದರಿಸಿದ ಹಿನ್ನೆಲೆ ➤ ಇಬ್ಬರು ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 11. ಮಂಗಳೂರು- ಉಡುಪಿ ನಡುವೆ ಸಂಚರಿಸುವ ಖಾಸಗಿ ಬಸ್ಸೊಂದರಲ್ಲಿ ಅನ್ಯಕೋಮಿನ ಯುವಕ ಹಾಗೂ ಯುವತಿ ಜೊತೆಯಾಗಿ ಪ್ರಯಾಣಿಸುತ್ತಿದ್ದನ್ನು ಕಂಡು ಸಾರ್ವಜನಿಕರು ಗದರಿಸಿದ ಪ್ರಕರಣಕ್ಕೆ ಸಂಬಂಧಿಸಿ, ಸ್ವಯಂಪ್ರೇರಿತ ದೂರು ದಾಖಲಿಸಿ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ.


ಘಟನೆಯಲ್ಲಿ ಐದರಿಂದ ಆರು ಜನರು ಭಾಗಿಯಾಗಿರುವ ಸಾಧ್ಯತೆಯಿದೆ ಎಂದು ಕಮಿಷನರ್ ಶಶಿಕುಮಾರ್ ತಿಳಿಸಿದ್ದಾರೆ. ಶುಕ್ರವಾರದಂದು ಈ ಘಟನೆ ನಡೆದಿದ್ದು, ಮಂಗಳೂರಿನ ಹೊರವಲಯದ ಕಾಲೇಜೊಂದರ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿ ಜೊತೆಯಾಗಿ ಬಸ್ ನಲ್ಲಿ ಅಸಭ್ಯ ರೀತಿಯಲ್ಲಿ ವರ್ತಿಸುತ್ತಿದ್ದರು ಎಂದು ಪ್ರಶ್ನಿಸಿ ಸಾರ್ವಜನಿಕರು ಗದರಿಸಿದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

Also Read  ಮೈಸೂರು ವಿಭಾಗ ಮಟ್ಟದ ವಿಜ್ಞಾನ ರಸಪ್ರಶ್ನೆ ಸ್ಪರ್ಧೆ

 

error: Content is protected !!
Scroll to Top