ಟೈರ್ ಪಂಕ್ಚರ್ ಆಗಿ ಮೀನು ಸಾಗಾಟದ ಲಾರಿ ಪಲ್ಟಿ ➤ ಚಾಲಕ ಪಾರು

(ನ್ಯೂಸ್ ಕಡಬ) newskadaba.com ಉಡುಪಿ, ಡಿ. 11. ಮೀನು ತುಂಬಿಸಿಕೊಂಡು ಹೋಗುತ್ತಿದ್ದ ಲಾರಿ ಪಲ್ಟಿಯಾದ ಘಟನೆ ಪಡುಬಿದ್ರಿ ರಾ.ಹೆ. 66ರಲ್ಲಿ ನಡೆದಿದೆ.

ಉಡುಪಿಯ ಮಲ್ಪೆ ಬಂದರಿ‌ನಿಂದ ಮಂಗಳೂರಿಗೆ ಮೀನು ತುಂಬಿಕೊಂಡು ಬರುತ್ತಿದ್ದ ವೇಳೆ ಪಡುಬಿದ್ರೆ ಸಮೀಪ ಟೈರ್ ಪಂಚರ್ ಆಗಿ ಲಾರಿ ಪಲ್ಟಿಯಾಗಿದೆ ಎನ್ನಲಾಗಿದೆ. ಅಪಘಾತದಲ್ಲಿ ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಈ ಕುರಿತು ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

 

 

Scroll to Top