ಬೆಳ್ಳಾರೆ: ಹೋರಿ ತಿವಿದು ವ್ಯಕ್ತಿ ಮೃತ್ಯು..!



(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಡಿ. 13. ಹೋರಿಯೊಂದು ತಿವಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಸುಳ್ಯ ತಾಲೂಕಿನ ಮುರುಳ್ಯದ ಕೋಡಿಯಡ್ಕ ಎಂಬಲ್ಲಿ ನಡೆದಿದೆ.








ಮೃತರನ್ನು ಮುರುಳ್ಯ ಗ್ರಾಮದ ಪೂದೆಯ ಕಿಟ್ಟಣ್ಣ ಗೌಡ (55) ಎಂದು ಗುರುತಿಸಲಾಗಿದೆ. ಇವರು ತೋಟದಲ್ಲಿ ಮೇಯಲು ಕಟ್ಟಿದ್ದ ಸಾಕು ಹೋರಿಯನ್ನು ಸಂಜೆ ತರಲು ತೆರಳಿದ್ದ ವೇಳೆ ಹೋರಿ ಕಿಟ್ಟಣ್ಣ ಗೌಡರ ಗುಪ್ತಾಂಗಕ್ಕೆ ತಿವಿದು ಗಾಯಗಳಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಮರುದಿನ ಆ ದಾರಿಯಲ್ಲಿ ಬಂದ ವ್ಯಕ್ತಿಯೋರ್ವರಿಗೆ ಕಿಟ್ಟಣ್ಣ ಗೌಡರು ಬಿದ್ದುಕೊಂಡಿರುವುದು ಕಂಡುಬಂದಿದ್ದು, ಹತ್ತಿರ ಹೋಗಿ ನೋಡುವಾಗ ಕಿಟ್ಟಣ್ಣ ಗೌಡರು ಮೃತಪಟ್ಟಿರುವುದು ತಿಳಿದು ಬಂದಿದೆ. ಈ ಕುರಿತು ಬೆಳ್ಳಾರೆ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು ಸ್ಥಳಕ್ಕೆ ಬಂದ ಪೊಲೀಸರು ತನಿಖೆ ನಡೆಸಿದ್ದಾರೆ.






 

 

 

error: Content is protected !!
Scroll to Top