ನೆಲ್ಯಾಡಿ: ಬೈಕ್ ಹಾಗೂ ಲಾರಿ ನಡುವೆ ಢಿಕ್ಕಿ ➤ ಓರ್ವ ಮೃತ್ಯು, ಮತ್ತೋರ್ವ ಗಂಭೀರ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಡಿ. 14. ಲಾರಿ ಹಾಗೂ ಬೈಕ್ ಹಾಗೂ ನಡುವೆ ಪರಸ್ಪರ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್‌ನಲ್ಲಿದ್ದ ಓರ್ವ ಮೃತಪಟ್ಟು, ಇನ್ನೋರ್ವ ಗಂಭೀರ ಗಾಯಗೊಂಡ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗೊಳಿತ್ತೊಟ್ಟು ಸಮೀಪದ ಸಣ್ಣಂಪಾಡಿಯಲ್ಲಿ ನಡೆದಿದೆ.


ಮೃತ ಯುವಕನನ್ನು ಇಚ್ಲಂಪಾಡಿ ಗ್ರಾಮದ ಮಾನಡ್ಕ ನಿವಾಸಿ ಜಾರ್ಜ್ ಹಾಗೂ ಝಾನ್ಸಿ ದಂಪತಿ ಪುತ್ರ ಅಲ್ವಿನ್ (23) ಎಂದು ಗುರುತಿಸಲಾಗಿದೆ. ಗಂಭೀರ ಗಾಯಗೊಂಡವರನ್ನು ನೆಲ್ಯಾಡಿ ಗ್ರಾಮದ ಪಡಡ್ಕ ನಿವಾಸಿ ಸೆಬಿನ್ ಎನ್ನಲಾಗಿದೆ. ಕೊರಿಯರ್ ಸಂಸ್ಥೆಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದ ಸೆಬಿನ್ ಸೋಮವಾರದಂದು ರಾತ್ರಿ ಸೆಬಿನ್ ಹಾಗೂ ಆಲ್ವಿನ್ ರವರು ಕೊರಿಯರ್ ಪಾರ್ಸೆಲ್ ಹಿಡಿದುಕೊಂಡು ನೆಲ್ಯಾಡಿಯಿಂದ ಉಪ್ಪಿನಂಗಡಿಗೆ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಮಂಗಳೂರಿನಿಂದ ಹಾಸನ ಕಡೆಗೆ ಹೋಗುತ್ತಿದ್ದ ಲಾರಿ ಮಧ್ಯೆ ಸಣ್ಣಂಪಾಡಿ ಎಂಬಲ್ಲಿ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಬೈಕ್ ಸವಾರರಿಬ್ಬರು ಗಂಭೀರ ಗಾಯಗೊಂಡಿದ್ದು, ಇಬ್ಬರನ್ನು ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಈ ಪೈಕಿ ಗಂಭೀರ ಗಾಯಗೊಂಡಿದ್ದ ಇಚ್ಲಂಪಾಡಿ ನಿವಾಸಿ ಅಲ್ವಿನ್‌ರವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

Also Read  ನೀರಿನ ಟ್ಯಾಂಕರ್, ಬೈಕ್ ಮುಖಾಮುಖಿ ಡಿಕ್ಕಿ ➤ ಇಬ್ಬರ ದುರ್ಮರಣ

 

 

error: Content is protected !!
Scroll to Top