ವಿಧಾನಪರಿಷತ್ ಚುನಾವಣಾ ಮತ ಎಣಿಕೆ ಆರಂಭ ➤ 25 ಕ್ಷೇತ್ರಗಳಲ್ಲಿ 90 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 14. ಮುಂಬರುವ ರಾಜ್ಯ ವಿಧಾನಸಭೆಯ ದಿಕ್ಸೂಚಿ ಎಂದೇ ಬಿಂಬಿತವಾಗಿರುವ ವಿಧಾನ ಪರಿಷತ್ ಚುನಾವಣೆಯ ಮತ ಎಣಿಕೆಗೆ ಕ್ಷಣಗಣನೆ ಆರಂಭವಾಗಿದೆ.


ರಾಜ್ಯದ ಬಹುತೇಕ ಕಡೆಗಳಲ್ಲಿ ಚುನಾವಣಾ ವೀಕ್ಷಕರ ಸಮಕ್ಷಮದಲ್ಲಿ ಭದ್ರತಾ ಕೊಠಡಿಯನ್ನು ತೆರೆಯಲಾಗಿದ್ದು, ಕೊಡಗು, ಶಿವಮೊಗ್ಗ, ಧಾರವಾಡ, ಬೆಳಗಾವಿ, ಕಲಬುರಗಿ, ಚಿತ್ರದುರ್ಗ, ಮೈಸೂರು, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ಉತ್ತರ ಕನ್ನಡ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ತುಮಕೂರು ಹಾಗೂ ವಿಜಯಪುರ ಕೇಂದ್ರಗಳಲ್ಲಿ ಸಕಲ ಸಿದ್ಧತೆಯೊಂದಿಗೆ ಮತ ಎಣಿಕೆ ಆರಂಭವಾಗಿದೆ. ಕಾಂಗ್ರೆಸ್ ಹಾಗೂ ಬಿಜೆಪಿ 20 ಕ್ಷೇತ್ರಗಳಲ್ಲಿ ಸ್ಪರ್ಧಿಸಿದರೆ ಜೆಡಿಎಸ್ 6 ಕ್ಷೇತ್ರಗಳಲ್ಲಿ ಚುನಾವಣೆಗೆ ಸ್ಪರ್ಧಿಸಿತ್ತು. ಒಟ್ಟು 25 ಕ್ಷೇತ್ರಗಳಲ್ಲಿ 90 ಅಭ್ಯರ್ಥಿಗಳ ಭವಿಷ್ಯ ಇಂದು ನಿರ್ಧಾರವಾಗಲಿದೆ. ಕಾಂಗ್ರೇಸ್, ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳಿಗೆ ಇದು ಪ್ರತಿಷ್ಠೆಯ ಚುನಾವಣೆಯಾಗಿದ್ದು, ರಾಜ್ಯ ರಾಜಕಾರಣದಲ್ಲಿ ಕುತೂಹಲ ಮೂಡಿಸಿದೆ.

Also Read  ಎಲ್ಲಾ ಶಾಲೆಗಳ ಮುಂದೆ ವಿದ್ಯಾರ್ಥಿಗಳಿಂದ ಸಂಗ್ರಹಿಸುವ ಶುಲ್ಕದ ಮಾಹಿತಿ ಫಲಕ ಕಡ್ಡಾಯ ► ಹೈಕೋರ್ಟ್ ಆದೇಶ

 

 

error: Content is protected !!
Scroll to Top