ಬೆಳ್ತಂಗಡಿ: ನೇಣು ಬಿಗಿದು ಯುವತಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ನ.06. ಯುವತಿಯೋರ್ವಳು ತನ್ನ ಮನೆಯ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿಯ ನಾವೂರು ಎಂಬಲ್ಲಿ ಭಾನುವಾರದಂದು ರಾತ್ರಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡಾಕೆಯನ್ನು ಬೆಳ್ತಂಗಡಿ ನಾವೂರು ನಿವಾಸಿ ಮಹಮ್ಮದ್ ಎಂಬವರ ಪುತ್ರಿ ಸೌಲತ್(21) ಎಂದು ಗುರುತಿಸಲಾಗಿದೆ. ಈಕೆ ತನ್ನ ಕೊಠಡಿಯಲ್ಲಿ ನೇಣು ಬಿಗಿದಿರುವುದನ್ನು ಗಮನಿಸಿದ ಸ್ಥಳೀಯರು ತಕ್ಷಣ ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ದಾಖಲಿಸಿದರಾದರೂ ಹಾದಿ ಮಧ್ಯೆ ಮೃತಪಟ್ಟಿದ್ದಾಳೆ.

Scroll to Top