ಕವಿ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪತ್ನಿ ರಾಜೇಶ್ವರಿ ವಿಧಿವಶ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 14. ಕವಿ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಅವರ ಪತ್ನಿ ರಾಜೇಶ್ವರಿ (84) ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.


ತೀವ್ರ ಜ್ವರದಿಂದ ಬಳಲುತ್ತಿದ್ದ ರಾಜೇಶ್ವರಿ ಅವರು, ಕಳೆದ ಮೂರ್ನಾಲ್ಕು ದಿನಗಳಿಂದ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರದಂದು ವಿಧಿವಶರಾಗಿದ್ದಾರೆ.

 

1937ರಲ್ಲಿ ಬೆಂಗಳೂರಿನ ಕಲಾಸಿಪಾಳ್ಯಂ ಹೊಸ ಬಡಾವಣೆಯಲ್ಲಿ ತೀರಾ ಸಾಮಾನ್ಯ ಕುಟುಂಬದಲ್ಲಿ ಹುಟ್ಟಿದ ಇವರು, ಹೆಣ್ಣು ಮಕ್ಕಳಿಗೂ ತಮ್ಮ ಕಾಲ ಮೇಲೆ ನಿಂತುಕೊಳ್ಳುವ ವಿದ್ಯಾಭ್ಯಾಸ ಕೊಡಬೇಕೆನ್ನುವ ತಮ್ಮ ತಂದೆಯ ಧ್ಯೇಯದಿಂದಾಗಿ ತತ್ವಶಾಸ್ತ್ರದಲ್ಲಿ ಆನರ್ಸ್ ಮತ್ತು ಎಂ.ಎ ಮಾಡಲು ಮಾನಸ ಗಂಗೋತ್ರಿ ಮೈಸೂರಿಗೆ ಬಂದರು. ಅಲ್ಲಿ ಪೂರ್ಣಚಂದ್ರ ತೇಜಸ್ವಿಯವರ ಪರಿಚಯವಾಗಿ ಪ್ರೀತಿಸಿ, 1966ರಲ್ಲಿ ವಿವಾಹವಾದರು. ಇವರು ಮೊಟ್ಟ ಮೊದಲಿಗೆ ‘ನನ್ನ ತೇಜಸ್ವಿ’ ಎಂಬ ಪುಸ್ತಕ ಬರೆದು, ಬಳಿಕ “ನಮ್ಮ ಮನೆಗೂ ಬಂದರು ಗಾಂಧೀಜಿ” ಎಂಬ ಪುಸ್ತಕವನ್ನು ಬರೆದಿದ್ದಾರೆ. ತೇಜಸ್ವಿ – ರಾಜೇಶ್ವರಿ ದಂಪತಿಗೆ ಇಬ್ಬರು ಹೆಣ್ಣುಮಕ್ಕಳಿದ್ದು, ಇಬ್ಬರೂ ಸಾಫ್ಟ್ ವೇರ್ ಇಂಜಿಯರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

Also Read  ಬೆಳ್ತಂಗಡಿ: ಕ್ಷುಲ್ಲಕ ಕಾರಣಕ್ಕೆ ಕಟ್ಟಡದಿಂದ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ

 

error: Content is protected !!
Scroll to Top