ಉಪ್ಪಿನಂಗಡಿ: ಪ್ರತಿಭಟನಾಕಾರರ ಮೇಲೆ ಲಾಠಿ ಚಾರ್ಜ್, ಹಲವರಿಗೆ ಗಾಯ ➤ 144 ಸೆಕ್ಷನ್ ಜಾರಿ, ಆತಂಕದಲ್ಲಿ ಸ್ಥಳೀಯರು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಡಿ.15. ಹಿಂದೂ ಸಂಘಟನೆಯ ಕಾರ್ಯಕರ್ತನ ಮೇಲೆ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ವಿಚಾರಣೆಗಾಗಿ ವಶಕ್ಕೆ ಪಡೆದುಕೊಂಡಿದ್ದ ಇಬ್ಬರು ಪಿಎಫ್‌ಐ ಮುಖಂಡರನ್ನು ಬಿಡುಗಡೆಗೊಳಿಸುವಂತೆ ಆಗ್ರಹಿಸಿ ಕಾರ್ಯಕರ್ತರು ರಾತ್ರಿ ವೇಳೆ ಠಾಣೆಗೆ ಮುತ್ತಿಗೆ ಯತ್ನ ನಡೆಸಿದಾಗ ಪೊಲೀಸರು ಲಾಠಿ ಚಾರ್ಜ್ ನಡೆಸಿದ ಘಟನೆ ಮಂಗಳವಾರ ರಾತ್ರಿ ಉಪ್ಪಿನಂಗಡಿಯಲ್ಲಿ ನಡೆದಿದೆ.

ಕೆಲ ದಿನಗಳ ಹಿಂದೆ ಉಪ್ಪಿನಂಗಡಿಯ ಹಳೆಗೇಟು ಬಳಿ ನಡೆದಿದ್ದ ತಲವಾರು ದಾಳಿ ಪ್ರಕರಣಕ್ಕೆ ಸಂಬಂಧಿಸಿ ಮೂವರು ಪಿಎಫ್‌ಐ ಮುಖಂಡರನ್ನು ವಿಚಾರಣೆಗಾಗಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು. ಅವರನ್ನು ಬಿಡುಗಡೆಗೊಳಿಸುವಂತೆ ಆಗ್ರಹಿಸಿ ಪಿಎಫ್ಐ ಕಾರ್ಯಕರ್ತರು ಬೆಳಗ್ಗಿನಿಂದಲೇ ಠಾಣೆ ಮುಂದೆ ಜಮಾಯಿಸಿ ಪ್ರತಿಭಟನೆ ನಡೆಸಿದ್ದರು. ಈ ಸಂಬಂಧ ಪೊಲೀಸರೊಂದಿಗೆ ನಡೆದ ಮಾತುಕತೆ ಬಳಿಕ ಓರ್ವನನ್ನು ಬಿಡುಗಡೆಗೊಳಿಸಲಾಗಿತ್ತು. ಆದರೆ ಉಳಿದ ಇಬ್ಬರನ್ನೂ ಬಿಡುಗಡೆಗೊಳಿಸಬೇಕು ಎಂದು ಆಗ್ರಹಿಸಿ ಕಾರ್ಯಕರ್ತರು ಮತ್ತೆ ಪ್ರತಿಭಟನೆಗಿಳಿದಾಗ ಲಾಠಿ ಚಾರ್ಜ್ ಮಾಡಲಾಗಿದ್ದು, ಇದರಿಂದಾಗಿ ಹಲವು ಪ್ರತಿಭಟನಾಕಾರರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೂವರು ಪೊಲೀಸರಿಗೂ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಸದ್ಯ ಉಪ್ಪಿನಂಗಡಿಯಲ್ಲಿ ಸೆಕ್ಷನ್ 144ರನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

 

 

error: Content is protected !!

Join the Group

Join WhatsApp Group