ಹೆಲಿಕಾಪ್ಟರ್ ಪತನ ➤ ಚಿಕಿತ್ಸೆ ಪಡೆಯುತ್ತಿದ್ದ ಕ್ಯಾಪ್ಟನ್ ವರುಣ್ ಸಿಂಗ್ ನಿಧನ



(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 15. ಕಳೆದ ವಾರ ಹೆಲಿಕಾಪ್ಟರ್ ಪತನದಲ್ಲಿ ಗಂಭೀರ ಗಾಯಗೊಂಡು ಬೆಂಗಳೂರಿನ ಕಮಾಂಡೋ ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕ್ಯಾಪ್ಟನ್ ವರುಣ್ ಸಿಂಗ್ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.







ದುರಂತದಿಂದಾಗಿ ಇವರು ಶೇ.45ರಷ್ಟು ಸುಟ್ಟ ಗಾಯದಿಂದ ಬಳಲುತ್ತಿದ್ದರು. ತಮಿಳುನಾಡಿನ ವೆಲ್ಲಿಂಗ್ಟನ್ ಸೇನಾ ಆಸ್ಪತ್ರೆಯಿಂದ ಬೆಂಗಳೂರಿನ ಕಮಾಂಡೊ ಆಸ್ಪತ್ರೆಗೆ ಏರ್ ಆಂಬ್ಯುಲೆನ್ಸ್ ಮೂಲಕ ಶಿಫ್ಟ್ ಮಾಡಲಾಗಿತ್ತು. ತಮಿಳುನಾಡಿನಲ್ಲಿ ನಡೆದ ಹೆಲಿಕಾಪ್ಟರ್ ಪತನದಲ್ಲಿ ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಸಹಿತ 13 ಮಂದಿ‌ ಈಗಾಗಲೇ ನಿಧನರಾಗಿದ್ದು, ವರುಣ್ ಸಿಂಗ್ ಮಾತ್ರ ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದರು. ವರುಣ್ ಸಿಂಗ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ.






 

 

 

 

error: Content is protected !!
Scroll to Top