ಕಡಬ ಸೇರಿದಂತೆ ಜಿಲ್ಲೆಯ ವಿವಿಧೆಡೆ ನಿಷೇಧಾಜ್ಞೆ ಜಾರಿಗೊಳಿಸಿ ಎಸಿ ಆದೇಶ ➤ ಪುತ್ತೂರು ಉಪವಿಭಾಗದಲ್ಲಿ 144 ಸೆಕ್ಷನ್

(ನ್ಯೂಸ್ ಕಡಬ) newskadaba.com ಕಡಬ, ಡಿ. 15. ಪುತ್ತೂರು ಉಪ ವಿಭಾಗದಲ್ಲಿ ಮುಂದಿನ ಎರಡು ದಿನಗಳ ಕಾಲ ಸೆಕ್ಷನ್‌ 144ರನ್ವಯ ನಿಷೇದಾಜ್ಙೆ ಜಾರಿಗೊಳಿಸಿ ಪುತ್ತೂರು ಸಹಾಯಕ ಆಯುಕ್ತ ಡಾ. ಯತೀಶ್‌ ಉಳ್ಳಾಲರವರು ಆದೇಶ ಹೊರಡಿಸಿದ್ದಾರೆ.

ಪುತ್ತೂರು, ಬೆಳ್ತಂಗಡಿ, ಸುಳ್ಯ ಹಾಗೂ ಕಡಬ ತಾಲೂಕಿನಾದ್ಯಂತ ನಿಷೇದಾಜ್ಙೆ ಜಾರಿಗೊಳಿಸಲಾಗಿದೆ. ಉಪ್ಪಿನಂಗಡಿಯಲ್ಲಿ ಡಿ 14 ರಂದು ರಾತ್ರಿ ನಡೆದ ಅಹಿತಕರ ಘಟನೆಯ ಹಿನ್ನೆಲೆ ಸಹಾಯಕ ಆಯುಕ್ತರು ಈ ಆದೇಶ ಹೊರಡಿಸಿದ್ದಾರೆ. ಭಾರತೀಯ ದಂಡ ಪ್ರಕ್ರಿಯಾ ಸಂಹಿತೆ 1973 ಕಲಂ 144 ರನ್ವಯ ಪ್ರದತ್ತವಾದ ಅಧಿಕಾರವನ್ನು ದಲಾಯಿಸಿ ಪುತ್ತೂರು ಉಪ ವಿಭಾಗಾದ್ಯಂತ ಇಂದಿನಿಂದ ಡಿ.17ರ ಮಧ್ಯರಾತ್ರಿ 12:00 ಗಂಟೆಯವರೆಗೆ ನಿಷೇದಾಜ್ಞೆಯನ್ನು ವಿಧಿಸಿ ಆದೇಶಿಸುತ್ತೇನೆ ಎಂದು ಸಹಾಯಕ ಆಯುಕ್ತರು ತನ್ನ ಆದೇಶದಲ್ಲಿ ತಿಳಿಸಿದ್ದಾರೆ.

Also Read  ಮಂಗಳೂರು: 'ಮುಲ್ಕಿ ಸುಂದರರಾಮ ಶೆಟ್ಟಿ' ಎಂದು ಮರುನಾಮಕರಣ ಪಡೆದ 'ಲೈಟ್ ಹೌಸ್ ಹಿಲ್' ರಸ್ತೆ*

error: Content is protected !!
Scroll to Top