ಸುಳ್ಯ: ವಿದ್ಯುತ್ ತಂತಿ ಸ್ಪರ್ಶಿಸಿ ಕೃಷಿಕರೋರ್ವರು ಮೃತ್ಯು

(ನ್ಯೂಸ್ ಕಡಬ) newskadaba.com ಸುಳ್ಯ, ಡಿ. 15. ವಿದ್ಯುತ್ ತಂತಿ ಸ್ಪರ್ಶಿಸಿ ಕೃಷಿಕರೋರ್ವರು ಮೃತಪಟ್ಟ ಘಟನೆ ಸುಳ್ಯ ತಾಲೂಕಿನ ಚೆಂಬು ಗ್ರಾಮದಲ್ಲಿ ನಡೆದಿದೆ.

ಮೃತರನ್ನು ಸುಳ್ಯ ತಾಲೂಕು ಚೆಂಬು ಗ್ರಾಮದ ದಾಸಪ್ಪ ಎಂದು ಗುರುತಿಸಲಾಗಿದೆ. ಇವರು ತಮ್ಮ ತೋಟದಲ್ಲಿನ ಕಾಳುಮೆಣಸಿನ ಕೊಯ್ಯಲೆಂದು ಬಳಸಿದ್ದ ಏಣಿಯು ಪಕ್ಕದಲ್ಲಿದ್ದ ವಿದ್ಯುತ್ ತಂತಿಗೆ ಸ್ಪರ್ಶಿಸಿದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.

Scroll to Top