ಉಪ್ಪಿನಂಗಡಿಯಲ್ಲಿ ಶಾಂತಿ ಕದಡಲೆತ್ನಿಸಿದ ಸಮಾಜಘಾತುಕರ ವಿರುದ್ದ ಕಠಿಣ ಕ್ರಮ ➤ ಸಚಿವ ಎಸ್.ಅಂಗಾರ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 16. ಉಪ್ಪಿನಂಗಡಿ ಪರಿಸರದಲ್ಲಿ ಶಾಂತಿ ಕದಡಲು ಯತ್ನಿಸುತ್ತಿರುವ ಸಮಾಜಘಾತುಕ ಶಕ್ತಿಯ ವಿರುದ್ದ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುವಂತೆ ದ.ಕ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಅವರು ಪೊಲೀಸ್ ಇಲಾಖೆಗೆ ಸೂಚಿಸಿದ್ದಾರೆ.

ಕರ್ತವ್ಯ ನಿರತ ಪೊಲೀಸರ ಮೇಲೆ ಹಲ್ಲೆ ನಡೆಸಲು ಯತ್ನಿಸಿದ ಘಟನೆಯನ್ನು ಸಹಿಸಲು ಸಾಧ್ಯವಿಲ್ಲ. ಘಟನೆಗೆ ಕಾರಣರಾದವರನ್ನು ಮಟ್ಟ ಹಾಕಲು ಪೊಲೀಸ್ ಇಲಾಖೆ ಸಮರ್ಥವಾಗಿದೆ. ಗಲಭೆಗೆ ಯತ್ನಿಸುವ ಸಂಘಟನೆಗಳ ವಿರುದ್ದ ಸರಕಾರ ಕಠಿಣ ಕ್ರಮ ಕೈಗೊಳ್ಳಲಿದೆ ಎಂದು ತಿಳಿಸಿದ್ದಾರೆ‌.

Also Read  ಆ. 04ರಂದು ಗೃಹಸಚಿವ ಅಮಿತ್ ಶಾ ಕರ್ನಾಟಕ ಪ್ರವಾಸ ➤ ಪ್ರವೀಣ್ ನೆಟ್ಟಾರು ಮನೆಗೆ ಭೇಟಿ ಸಾಧ್ಯತೆ..?

error: Content is protected !!
Scroll to Top