ದ.ಕ. ಜಿಲ್ಲೆ: ವಿವಿಧ ಹೆದ್ದಾರಿ ಕಾಮಗಾರಿ ಯೋಜನೆಗಳ ಅನುಷ್ಠಾನಕ್ಕೆ ಗಡ್ಕರಿ ಸೂಚನೆ

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ. 16. ದಕ್ಷಿಣ ಕನ್ನಡ ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಕೇಂದ್ರ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ ದಕ್ಷಿಣ ಕನ್ನಡ ಜಿಲ್ಲಾ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಷಯಗಳ ಕುರಿತು ಚರ್ಚೆ ನಡೆಸಿದರು.


ಈ ಚರ್ಚೆಯಲ್ಲಿ ಜ. 10ರಂದು ಮಂಗಳೂರಿಗೆ ಆಗಮಿಸಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2555.88 ಕೋಟಿ ರೂ. ವೆಚ್ಚದಲ್ಲಿ ವಿವಿಧ ಹೆದ್ದಾರಿ ಕಾಮಗಾರಿಗಳ ಶಿಲಾನ್ಯಾಸ ಹಾಗೂ ಕಾಮಗಾರಿಗಳ ಪುನರ್ ಚಾಲನೆ ನೀಡಲಿರುವ ಕುರಿತು ಮಾತನಾಡಲಾಯಿತು. ಅಲ್ಲದೇ ಈ ಸಂದರ್ಭದಲ್ಲಿ ಮಂಗಳೂರು ಬೆಂಗಳೂರು ನಡುವಿನ ಶಿರಾಡಿ ಘಾಟ್ ಸುರಂಗ ಮಾರ್ಗದ ಯೋಜನೆಯನ್ನು ಕೂಡಾ ಶೀಘ್ರದಲ್ಲೇ ಕೈಗೆತ್ತಿಕೊಳ್ಳುವಂತೆ ಸಂಸದರು ತಿಳಿಸಿದ್ದಾರೆ. ಸಂಸದರ ಬೇಡಿಕೆಗೆ ಸ್ಪಂದಿಸಿದ ಸಚಿವರು ಜಿಲ್ಲೆಗೆ ಸಹಕಾರಿಯಾಗುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯನ್ನು ಆದಷ್ಟು ಬೇಗನೆ ಪೂರ್ಣಗೊಳಿಸಲು ಸಂಬಂಧಪಟ್ಟ ಇಲಾಖೆಗೆ ಸೂಚಿಸುವುದಾಗಿ ತಿಳಿಸಿದರು‌.

Also Read  ನಾಳೆ (ಜು. 26) ದಿನ ಪೂರ್ತಿ ವಿದ್ಯುತ್ ಕಡಿತ

error: Content is protected !!
Scroll to Top