(ನ್ಯೂಸ್ ಕಡಬ) newskadaba.com ನವದೆಹಲಿ, ಡಿ. 16. ಮಹಿಳೆಯರ ಮದುವೆ ವಯಸ್ಸಿನ ಮಿತಿಯನ್ನು 18ರಿಂದ 21 ಕ್ಕೆ ಏರಿಸುವ ಪ್ರಸ್ತಾಪವನ್ನು ಇದೀಗ ಸಂಪುಟ ಅಂಗೀಕರಿಸಿದೆ.
ಪ್ರಧಾನಿ ಮೋದಿಯವರು 2020ರ ಸ್ವಾತಂತ್ರ್ಯೋತ್ಸವದ ಭಾಷಣದಲ್ಲಿ ಯುವತಿಯರ ಮದುವೆ ವಯಸ್ಸನ್ನು 18ಕ್ಕೆ ನಿಗದಿಪಡಿಸಲಾಗಿದ್ದು, ಇದನ್ನು ಮರು ಪರಿಶೀಲನೆ ನಡೆಸಲಾಗುವುದು ಎಂದು ಹೇಳಿದ್ದರು. ಇದನ್ನು ಒಂದೂವರೆ ವರ್ಷದ ಬಳಿಕ ಅನುಷ್ಠಾನಕ್ಕೆ ತರಲು ಸರಕಾರ ನಿರ್ಧರಿಸಿದೆ. ದೇಶದಲ್ಲಿ ಬಾಣಂತಿ- ಶಿಶುಗಳ ಮರಣ ಪ್ರಮಾಣ ಕಡಿಮೆ ಮಾಡಲು, ಪೌಷ್ಟಿಕಾಂಶದ ಕೊರತೆ ನೀಗಿಸಲು ಮತ್ತು ಮಹಿಳೆಯರ ಮದುವೆ ವಯಸ್ಸಿನ ಮಿತಿ ಹೆಚ್ಚಿಸುವುದರಿಂದ ಸಹಜವಾಗಿಯೇ ತಾಯ್ತನದ ವಯಸ್ಸಿನ ಮಿತಿಯೂ ಏರುತ್ತದೆ. ಹೀಗಾಗಿ ಒಂದಷ್ಟು ಸಮಸ್ಯೆಗಳು ನಿವಾರಣೆಯಾಗಬಹುದು ಎಂದು ಗಮನದಲ್ಲಿಟ್ಟು, ಇದರ ಬಗ್ಗೆ ಚರ್ಚಿಸಲು ಕೇಂದ್ರ ಸರಕಾರ ಟಾಸ್ಕ್ ಫೋರ್ಸ್ ರಚಿಸಿತ್ತು. ಈ ಶಿಫಾತಸ್ಸಿನ ಅನ್ವಯ ಪ್ರಸ್ತಾವನೆಗೆ ಕೆಂದ್ರ ಸಂಪುಟ ಅನುಮೋದನೆ ನೀಡಿದೆ.