ಲಂಚ ಸ್ವೀಕಾರ ಪ್ರಕರಣ ➤ ಇಬ್ಬರು ಆರೋಪಿಗಳಿಗೆ ಶಿಕ್ಷೆ ಪ್ರಕಟ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 17. ಲಂಚ ಸ್ವೀಕಾರ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಮಂಗಳೂರು ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಯು.ಜಿತೇಂದ್ರ ನಾಥ್ ಅವರಿಗೆ 7 ವರ್ಷ ಶಿಕ್ಷೆ ಹಾಗೂ ಮೂವತ್ತು ಸಾವಿರ ರೂ. ಡಂದ ಹಾಗೂ ಎರಡನೇ ಆರೋಪಿ ಗುತ್ತಿಗೆ ಆಧಾರಿತ ಕಂಪ್ಯೂಟರ್ ಆಪರೇಟರ್ ಅನುಷ್ಕಾ ಗೆ ಮೂರು ವರ್ಷಗಳ ಸಾದಾ ಸಜೆ ಹಾಗೂ ಹತ್ತು ಸಾವಿರ ದಂಡವನ್ನು ಮಂಗಳೂರಿನ ಮೂರನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಧೀಶ ಬಿ.ಬಿ ಜಕಾತಿ ಅವರು ತೀರ್ಪು ನೀಡಿದ್ದಾರೆ.


ಅಲ್ಪಸಂಖ್ಯಾತರಿಗೆ ರಾಜ್ಯ ಸರಕಾರದಿಂದ ಪ್ರವಾಸಿ ಟ್ಯಾಕ್ಸಿ ಖರೀದಿಸಲು ದೊರೆಯುವ ಸಹಾಯಧನದ ಮಂಜೂರಾತಿಗೆ ಜಿತೇಂದ್ರನಾಥ್ ಹದಿನೈದು ಸಾವಿರ ರೂ. ಲಂಚ ಬೇಡಿಕೆ ಇಟ್ಟಿದ್ದರು. ಈ ಕುರಿತು ಬರ್ನಾಡ್ ರೋಶನ್ ಮಸ್ಕರೇನ್ಹಸ್ ಲೋಕಾಯುಕ್ತಕ್ಕೆ ನೀಡಿದ ದೂರಿನಂತೆ 2014ರ ಸೆ. 10ರಂದು ದಾಳಿ ನಡೆದಿತ್ತು.

Also Read  ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿ 10 ರೂ. ನೀಡಿದ ಅಜ್ಜ

error: Content is protected !!
Scroll to Top