ಶೌಚಾಲಯದ ಗೋಡೆ ಕುಸಿದು ಮಹಿಳೆಯರಿಬ್ಬರು ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಡಿ.19. ಶೌಚಾಲಯದ ಹಳೆಯ ಗೋಡೆಯನ್ನು ಕೆಡವುತ್ತಿದ್ದ ವೇಳೆ ಗೋಡೆ ಮೈಮೇಲೆ ಕುಸಿದು ಬಿದ್ದ ಪರಿಣಾಮ ಗಂಭೀರ ಗಾಯಗೊಂಡ ಮಹಿಳೆಯರಿಬ್ಬರು ಆಸ್ಪತ್ರೆಗೆ ಸಾಗಿಸುವ ಹಾದಿ ಮಧ್ಯೆ ಮೃತಪಟ್ಟ ದಾರುಣ ಘಟನೆ ಕಡಬ ಸಮೀಪದ ಎಣ್ಮೂರು ಗ್ರಾಮದ ನರ್ಲಡ್ಕ ಎಂಬಲ್ಲಿ ನಡೆದಿದೆ.

ಮೃತ ಮಹಿಳೆಯರನ್ನು ನರ್ಲಡ್ಕ ನಿವಾಸಿ ಬೀಫಾತಿಮ್ಮ(60) ಹಾಗೂ ನಫೀಸಾ(45) ಎಂದು ಗುರುತಿಸಲಾಗಿದೆ. ಮೃತ ಮಹಿಳೆಯರು ನೆರೆ ಮನೆಯ ಹರೀಶ ನಾಯ್ಕ್ ಎಂಬವರ ಮನೆಯ ಹಳೆಯ ಶೌಚಾಲಯದ ಗೋಡೆಯನ್ನು ಹೊಸ ಕಟ್ಟಡ ಕಟ್ಟುವುದಕ್ಕಾಗಿ ಕೆಡವುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ. ತಕ್ಷಣವೇ ಅಲ್ಲಿದ್ದ ಇತರರು ಮಣ್ಣಿನ ರಾಶಿಯಿಂದ ಇವರಿಬ್ಬರನ್ನು ಹೊರತೆಗೆದು ಆಸ್ಪತ್ರೆಗೆ ಸಾಗಿಸಿದರಾದರೂ ಆಸ್ಪತ್ರೆ ತಲುಪುವ ವೇಳೆಗೆ ಕೊನೆಯುಸಿರೆಳೆದಿದ್ದಾರೆಂದು ತಿಳಿದುಬಂದಿದೆ. ದುರಂತ ಸ್ಥಳಕ್ಕೆ ಬೆಳ್ಳಾರೆ ಎಸ್ಐ ಆಂಜನೇಯರೆಡ್ಡಿ, ಮಾಜಿ ತಾಲ್ಲೂಕು ಪಂಚಾಯತ್ ಸದಸ್ಯ ಅಬ್ದುಲ್ ಗಫೂರ್ ಕಲ್ಮಡ್ಕ ಸೇರಿದಂತೆ ಹಲವರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

Also Read  ಚೀನಾ: ಕೊರಾನಾ ವೈರಸ್‌ಗೆ ಬಲಿಯಾದವರ ಸಂಖ್ಯೆ 106 ಕ್ಕೇರಿಕೆ

 

 

error: Content is protected !!
Scroll to Top