ಎಂಬಿಬಿಎಸ್ ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ..!

(ನ್ಯೂಸ್ ಕಡಬ) newskadaba.com ಉಳ್ಳಾಲ, ಡಿ. 20. ಖಾಸಗಿ ವಸತಿ ಸಂಕೀರ್ಣದಲ್ಲಿ ವಾಸವಾಗಿದ್ದ ಎಂಬಿಬಿಎಸ್ ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುತ್ತಾರು ಎಂಬಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡವಳನ್ನು ಬೀದರ್ ಆನಂದನಗರ ನಿವಾಸಿ ವೈಶಾಲಿ ಗಾಯಕವಾಡ್ ಎಂದು ಗುರುತಿಸಲಾಗಿದೆ. ಕಣಚೂರು ವೈದ್ಯಕೀಯ ಕಾಲೇಜಿನಲ್ಲಿ ಅಂತಿಮ ಎಂಬಿಬಿಎಸ್ ಪದವಿ ಮುಗಿಸಿ ಅಲ್ಲೇ ಇಂಟರ್ನ್ಶಿಪ್ ನಡೆಸುತ್ತಿದ್ದ ಈಕೆ ವಸತಿ ಕೋಣೆಯಲ್ಲಿ ಫ್ಯಾನ್ ಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಈ ಕುರಿತು ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Also Read  ’ಜವಾಹರ್‌ ಲಾಲ್‌ ನೆಹರೂ ಆಧುನಿಕ ಭಾರತದ ಶಿಲ್ಪಿ’ - ಸಿಎಂ ಸಿದ್ದರಾಮಯ್ಯ

 

error: Content is protected !!
Scroll to Top