(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 20. ಕಳೆದ ಎರಡು ದಿನಗಳ ಹಿಂದೆ ಮಂಗಳೂರಿನಲ್ಲಿ ಐದು ಒಮಿಕ್ರಾನ್ ಪ್ರಕರಣಗಳು ದೃಢಪಟ್ಟಿದ್ದು, ಈ ಬೆನ್ನಲ್ಲೇ ಇದೀಗ ಮತ್ತೊಂದು ಒಮಿಕ್ರಾಮ್ ಪ್ರಕರಣ ಪತ್ತೆಯಾಗಿ, ಸೋಂಕಿತರ ಸಂಖ್ಯೆ ಆರಕ್ಕೆ ಏರಿಕೆಯಾಗಿದೆ. ಈ ಮೂಲಕ ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ.
ಎರಡು ದಿನಗಳ ಹಿಂದೆ ಕುರ್ನಾಡು ಜೆಎನ್ ವಿ ಶಾಲೆಯ ನಾಲ್ವರು ಹಾಗೂ ಶ್ರೀನಿವಾಸ್ ನರ್ಸಿಂಗ್ ಕಾಲೇಜಿನ ಓರ್ವ ವಿದ್ಯಾರ್ಥಿನಿಗೆ ಸೋಂಕು ದೃಢಪಟ್ಟಿದ್ದು, ಇದಂಉ ಶ್ರೀನಿವಾಸ್ ಕಾಲೇಜಿನ ಮತ್ತೋರ್ವ ವಿದ್ಯಾರ್ಥಿನಿಗೆ ರೂಪಾಂತರಿ ಕೊರೋನಾ ದೃಢಪಟ್ಟಿರುವುದು ವರದಿಯಾಗಿದೆ. ಸೋಂಕಿತ ವಿದ್ಯಾರ್ಥಿನಿ ಆರೋಗ್ಯವಾಗಿದ್ದಾಳೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಈ ಆರು ಮಂದಿ ಸೋಂಕಿತರಲ್ಲಿ ಟ್ರಾವೆಲ್ ಹಿಸ್ಟರಿ ಇಲ್ಲದೇ ಇದ್ದರೂ ವೈರಸ್ ಕಾಣಿಸಿಕೊಂಡಿರುವುದು ಆಶ್ಚರ್ಯ ಮೂಡಿಸಿದೆ.