ಚಲಿಸುತ್ತಿದ್ದ ರೈಲಿನಿಂದ ಬಿದ್ದು ವ್ಯಕ್ತಿ ಮೃತ್ಯು..!

(ನ್ಯೂಸ್ ಕಡಬ) newskadaba.com ಹುಬ್ಬಳ್ಳಿ, ಡಿ. 20. ಚಲಿಸುತ್ತಿದ್ದ ರೈಲಿನಿಂದ ಬಿದ್ದು ಬಿಬಿಎಂಪಿ ಸೂಪರಿಂಡೆಂಟ್ ಇಂಜಿನಿಯರ್ ಓರ್ವ ದಾರುಣವಾಗಿ ಮೃತಪಟ್ಟ ಘಟನೆ ಭಾನುವಾರದಂದು ರಾತ್ರಿ ಹುಬ್ಬಳ್ಳಿಯಲ್ಲಿ ನಡೆದಿದೆ.

ಮೃತಪಟ್ಟವರನ್ನು ರಂಗರಾಜು ಎಸ್(59) ಎಂದು ಗುರುತಿಸಲಾಗಿದೆ‌. ಇವರು ಹುಬ್ಬಳ್ಳಿ-ಬೆಂಗಳೂರು ರೈಲಿಗೆ ಹತ್ತುವ ಬದಲು ಬೆಳಗಾವಿ- ಬೆಂಗಳೂರು ರೈಲಿಗೆ ಹತ್ತಿದ್ದು, ರೈಲು ಚಲಿಸಲಾರಂಭಿಸಿದ ಬಳಿಕ ರೈಲು ಬದಲಾದ ವಿಚಾರ ತಿಳಿದ ಇವರು ರೈಲಿನಿಂದ ಇಳಿಯಲೆತ್ನಿಸಿದ್ದಾರೆ. ಈ ಸಂದರ್ಭ ಪ್ಲಾಟ್ ಫಾರಂ ನಲ್ಲೇ ಬಿದ್ದು ಮೃತಪಟ್ಟಿದ್ದಾರೆ ಎನ್ನಲಾಗಿದೆ.

Also Read  37ನೇ ರಾಜ್ಯ ಮಟ್ಟದ ಪತ್ರಕರ್ತರ ಸಮ್ಮೇಳನ !

error: Content is protected !!
Scroll to Top