ಇನ್ಮುಂದೆ ಗ್ರಾ.ಪಂ. ಗಳಲ್ಲೇ ಸಿಗಲಿದೆ ಜಾತಿ- ಆದಾಯ ಪ್ರಮಾಣಪತ್ರ..! ➤ ಗ್ರಾಮೀಣ ಜನತೆಗೆ ಸಿಹಿಸುದ್ದಿ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ

(ನ್ಯೂಸ್ ಕಡಬ) newskadaba.com ಹಾವೇರಿ, ಡಿ. 20. ಜಾತಿ ಮತ್ತು ಆದಾಯ ಪ್ರಮಾಣಪತ್ರ, ಸಂಧ್ಯಾ ಸುರಕ್ಷಾ ಸೇರಿದಂತೆ ಹಲವಾರು ಸೇವೆಗಳನ್ನು ತಾಲೂಕು ಕಛೇರಿಗಳಿಂದ ವಿಂಗಡಿಸಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸಿಗುವಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಗ್ರಾಮೀಣ ಜನತೆಗೆ ಸಂತಸದ ಸುದ್ದಿಯೊಂದನ್ನು ನೀಡಿದ್ದಾರೆ.


ಈ ಕುರಿತು ಶಿಗ್ಗಾಂವ್ ನ ಬಿಸನಹಳ್ಳಿ ಗ್ರಾಮದಲ್ಲಿ ಸಿಎಂ ಅವರು, ಗ್ರಾಮೀಣ ಜನರು ಕೆಲವು ಸೇವೆಗಳನ್ನು ಪಡೆಯಲು ತಾಲೂಕು ಕೇಂದ್ರಗಳಿಗೆ ಹೋಗುವುದನ್ನು ತಪ್ಪಿಸಲು, 2022ರ ಗಣರಾಜ್ಯೋತ್ಸವ ದಿನದಿಂದ ಗ್ರಾಮ ಪಂಚಾಯತ್ ಗಳಲ್ಲಿ ಜಾತಿ ಆದಾಯ ಪ್ರಮಾಣ ಪತ್ರ ಸೇರಿದಂತೆ ಹಲವು ಸೇವೆಗಳನ್ನು ನೀಡಲು ಸಿದ್ದತೆ ಮಾಡಲಾಗಿದ್ದು, ಇದರ ಪೂರ್ವಭಾವಿಯಾಗಿ ಇಂಟರ್ನೆಟ್ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಅಭಿವೃದ್ಧಿ ಪಡಿಸಲಾಗುವುದು ಎಂದು ಹೇಳಿದರು.

Also Read  ಕನ್ನಡ ನಾಮಫಲಕ ಅಳವಡಿಕೆಗೆ ಮತ್ತೆ 2 ವಾರಗಳ‌ ಅವಧಿ ವಿಸ್ತರಣೆ- ಡಿಸಿಎಂ ಡಿಕೆಶಿವಕುಮಾರ್

error: Content is protected !!
Scroll to Top